Publish Date: Tue, 19 Dec 2023 (18:42 IST)
Updated Date: Tue, 19 Dec 2023 (19:59 IST)
ದೆಹಲಿ ಅಬಕಾರಿ ಹಗರಣದ ಕುಣಿಕೆ ಬಿಗಿಯಾಗುತ್ತಿದೆ. ದೆಹಲಿಯಲ್ಲಿ ಅಧಿಕಾರದಲ್ಲಿರುವ ಆಮ್ ಆದ್ಮಿ ಪಾರ್ಟಿ ನಾಯಕರು ಸಂಕಷ್ಟಕ್ಕೆ ಸಿಲುಕಿದ್ದಾರೆ.
ದೆಹಲಿ ಉಪಮುಖ್ಯಮಂತ್ರಿಯಾಗಿದ್ದ ಮನೀಶ್ ಸಿಸೋಡಿಯಾ ಇದೇ ಪ್ರಕರಣದಲ್ಲಿ ಜೈಲು ಸೇರಿ ಜಾಮೀನಿಗಾಗಿ ಅಲೆದಾಡುತ್ತಿದ್ದಾರೆ. ಇದೀಗ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ ಇದೇ ಪ್ರಕರಣ ಸಂಬಂಧ ಡಿಸೆಂಬರ್ 21ಕ್ಕೆ ವಿಚಾರಣೆಗೆ ಹಾಜರಾಗಲು ಸಮನ್ಸ್ ನೀಡಲಾಗಿದೆ.