Publish Date: Sun, 10 Apr 2022 (07:27 IST)
Updated Date: Sun, 10 Apr 2022 (07:59 IST)
ಬೀದರ್ : ಸುರ್ಜೆವಾಲ ಟ್ವೀಟ್ಗೆ ಯಾವುದೇ ಕಿಮ್ಮತ್ತಿಲ್ಲ, ಅವರ ಹತ್ತಿರ ಏನಾದ್ರು ಆಧಾರ ಇದ್ದರೆ ಕೊಡಲಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ.
ಬಿಟ್ ಕಾಯಿನ್ ಬಗ್ಗೆ ಕಾಂಗ್ರೆಸ್ ರಾಜ್ಯ ಉಸ್ತುವಾರಿ ಸುರ್ಜೆವಾಲ ಟ್ವೀಟ್ ವಿಚಾರವಾಗಿ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಸಿಎಂ, ಸುಮ್ಮನೆ ಟ್ವೀಟ್ ಮಾಡಿದರೆ ಏನು ಪ್ರಯೋಜನೆ ಇಲ್ಲ. ಈ ಬಗ್ಗೆ ಸದನದಲ್ಲೇ ಹೇಳಿದ್ದೇನೆ ಎಂದು ಸುರ್ಜೆವಾಲಗೆ ಟಾಂಗ್ ನೀಡಿದ್ದಾರೆ.
ವಕ್ಫ್ ಬೋರ್ಡ್ ಬ್ಯಾನ್ ಬಗ್ಗೆ ಪ್ರಮೋದ್ ಮುತಾಲಿಕ್ ಹೇಳಿಕೆ ವಿಚಾರ ಪ್ರತಿಕ್ರಿಯೆ ನೀಡಿದ ಸಿಎಂ, ಅವರು ಯಾವ ಅಭಿಯಾನ ಬೇಕಾದರೂ ಮಾಡಲಿ. ಅದಕ್ಕೂ ನಮಗೂ ಸಂಬಂಧವಿಲ್ಲ. ನಾವು ಕಾನೂನು ಸುವ್ಯವಸ್ಥೆ ಶಾಂತಿ ಕಾಪಾಡಬೇಕು ಎಂದಿದ್ದಾರೆ.