Select Your Language

Notifications

webdunia
webdunia
webdunia
Saturday, 12 April 2025
webdunia

ಮನೆ ಕುಸಿತ ದುರಂತ: ಮುಖ್ಯಮಂತ್ರಿ ಸಂತಾಪ

cm basavaraj bommai
bangalore , ಗುರುವಾರ, 7 ಅಕ್ಟೋಬರ್ 2021 (14:10 IST)
ಬೆಳಗಾವಿ ತಾಲೂಕಿನ ಬಡಾಲ ಅಂಕಲಗಿ ಮನೆ ಕುಸಿತ ದುರಂತಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮನೆ ಕುಸಿತದಿಂದ ಸಂಭವಿಸಿರುವ ಅನಾಹುತದಿಂದ ಒಂದೇ ಕುಟುಂಬದ ಏಳು ಜನರು ಸಾವನ್ನಪ್ಪಿರುವುದಕ್ಕೆ ತೀವ್ರ ಆಘಾತ ವ್ಯಕ್ತಪಡಿಸಿರುವ ಮುಖ್ಯಮಂತ್ರಿಗಳು, ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸಿದ್ದಾರೆ. ಮೃತಪಟ್ಟ ವ್ಯಕ್ತಿಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದು, ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ ನಾಳೆ ಘಟನಾ ಸ್ಥಳಕ್ಕೆ ಭೇಟಿ ನೀಡುವಂತೆ ಸಿಎಂ ಸಲಹೆ ನೀಡಿದ್ದಾರೆ. ಕೂಡಲೇ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಬೆಳಗಾವಿ ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಡಬಲ್ ಇಂಜಿನ್ ಸರ್ಕಾರವಿದ್ದರೂ ಅಭಿವೃದ್ಧಿಯಾಗಿಲ್ಲ: ಡಿ.ಕೆ.ಶಿವಕುಮಾರ್