Publish Date: Thu, 26 Jan 2023 (19:01 IST)
Updated Date: Thu, 26 Jan 2023 (19:05 IST)
ದೇವಾಲಯ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಸ್ವಾಮೀಜಿಯ ಮೇಲೆ ಸಿಎಂ ಬಸವರಾಜ ಬೊಮ್ಮಾಯಿ ಸಿಡಿಮನಿಗೊಂಡಿದ್ದಾರೆ. ಹೌದು ಇಂದು ಬೆಂಗಳೂರಿನ ಗರುಡಾಚಾರ್ ಪಾಳ್ಯದಲ್ಲಿ ಶ್ರೀ ಮಂಜುನಾಥ ಸ್ವಾಮಿ ದೇವಾಲಯ ಲೋಕಾರ್ಪಣೆ ಮಾಡಲಾಯಿತು ಈ ಕಾರ್ಯಕ್ರಮದಲ್ಲಿ ಕಾಗಿನೆಲೆ ಈಶ್ವರಾನಂದ ಸ್ವಾಮೀಜಿ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಬ್ಬರು ಸಹ ಪಾಲ್ಗೊಂಡಿದೆ ಸಮಯದಲ್ಲಿ ಮೈಕ್ ನಲ್ಲಿ ಮಾತನಾಡಿದ ಸ್ವಾಮೀಜಿ ಕೇವಲ ಆಶ್ವಾಸನೆಯನ್ನು ಕೊಡುವ ಮುಖ್ಯಮಂತ್ರಿಗಳು ನೀವಾಗಬಾರದು ಬೆಂಗಳೂರು ನಗರದಲ್ಲಿ ಮಳೆ ಬಂದ ಪ್ರವಾಹ ಸೃಷ್ಟಿಯಾಗಿತ್ತು ಅಧಿಕಾರಿಗಳಿಗೆ ಮನವರಿಕೆ ಆಗುತ್ತಿಲ್ಲ ಎಂದು ಬಸವರಾಜ ಬೊಮ್ಮಾಯಿ ಅವರಿಗೆ ಹೇಳಿದ್ದಾರೆ ಇದೇ ಸಮಯದಲ್ಲಿ ಸಿಡಿಮಿಡಿಕೊಂಡ ಸಿಎಂ ಬಸವರಾಜ ಬೊಮ್ಮಾಯಿ ಕಸಿದುಕೊಂಡು ಸ್ವಾಮೀಜಿ ಅವರಿಗೆ ಉತ್ತರ ನೀಡಿ ಈಗಾಗಲೇ ಕೆಲಸ ಪ್ರಾರಂಭ ಮಾಡಿದ್ದಾರೆ, ಹತ್ತುವರಿ ತೆಲುಗು ಮಾಡುವ ಮೂಲಕ ಆದಷ್ಟು ಬೇಗ ರಾಜ ಕಾಲುವೆಗಳ ಕೆಲಸ ಪೂರ್ಣ ಮಾಡುತ್ತೇವೆ. ಅದಕ್ಕೆ ಬೇಕಾದ ಎಲ್ಲಾ ಅನುದಾನವನ್ನು ಸಹ ಸರ್ಕಾರದಿಂದ ಕೊಡಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.