ಮತ್ತೆ ದೆಹಲಿಯತ್ತ ಸಿಎಂ ಬೊಮ್ಮಾಯಿ

Webdunia
ಶನಿವಾರ, 21 ಆಗಸ್ಟ್ 2021 (12:07 IST)
ಬೆಂಗಳೂರು,ಆ.21 : ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡು ಒಂದು ತಿಂಗಳು ಆಗುತ್ತಿರುವ ಸಂದರ್ಭದಲ್ಲಿ ಬಸವರಾಜ ಬೊಮ್ಮಾಯಿಯವರು ಮೂರನೇ ಬಾರಿಗೆ ಮತ್ತೆ ದೆಹಲಿಗೆ ಭೇಟಿ ನೀಡುತ್ತಿದ್ದಾರೆ.

ಈ ಬಾರಿಯ ದೆಹಲಿ ಭೇಟಿಯಲ್ಲಿ ರಾಜ್ಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಲಸಿಕೆ ನೀಡುವಂತೆ ಮತ್ತು ರಾಜ್ಯದ ಯೋಜನೆಗಳನ್ನು ಕೇಂದ್ರ ಸಚಿವರೊಂದಿಗೆ ಚರ್ಚಿಸುವ ಉದ್ದೇಶವಿದೆ.
ಇದರೊಂದಿಗೆ ಸಂಪುಟ ರಚನೆಯ ಬಳಿಕ ಹಾಗೂ ಖಾತೆ ಹಂಚಿಕೆ ನಂತರ ರಾಜ್ಯದಲ್ಲಾಗುತ್ತಿರುವ ರಾಜಕೀಯ ಸ್ಥಿತಿಗತಿಗಳ ಬಗ್ಗೆ ಕೇಂದ್ರ ನಾಯಕರೊಂದಿಗೆ ಸಿಎಂ ಚರ್ಚೆ ನಡೆಸಲಿದ್ದಾರೆ. ಕೇಂದ್ರದ ಹಲವು ಸಚಿವರುಗಳೊಂದಿಗೆ ಮಾತುಕತೆ ನಡೆಸಲು ಭೇಟಿಯ ಅವಧಿಯನ್ನು ಕೇಳಿದ್ದು ಅವರಿಂದ ಸಮಯ ಅವಕಾಶ ದೃಢಪಟ್ಟ ಕೂಡಲೇ ದೆಹಲಿಗೆ ತೆರಳುತ್ತಿದ್ದಾರೆ.
ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ಅವರನ್ನು ಭೇಟಿ ಮಾಡಿ ರಾಜ್ಯಕ್ಕೆ ಹೆಚ್ಚಿನ ಲಸಿಕೆ ನೀಡುವಂತೆ ಕೋರಲಿದ್ದಾರೆ. ಕರ್ನಾಟಕಕ್ಕೆ ಸದ್ಯ 65 ಲಕ್ಷ ಡೋಸ್ ಲಸಿಕೆ ಪ್ರತಿವರ್ಷ ಸಿಗುತ್ತಿದೆ, ಅದನ್ನು ಒಂದು ಕೋಟಿಗೆ ಹೆಚ್ಚಳ ಮಾಡಬೇಕೆಂಬುದು ಮುಖ್ಯಮಂತ್ರಿಗಳ ಉದ್ದೇಶವಾಗಿದೆ.
ಇದೇ ಸಂದರ್ಭದಲ್ಲಿ ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಕೂಡ ಭೇಟಿ ಮಾಡಲಿರುವ ಬೊಮ್ಮಾಯಿ ಅವರು ಮೇಕೆದಾಟು ಯೋಜನೆ ಬಗ್ಗೆ ಚರ್ಚೆ ನಡೆಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಮಹದೇವಪ್ಪರನ್ನು ಭೇಟಿಯಾಗಿ ನವೆಂಬರ್ ಕ್ರಾಂತಿ ಬಗ್ಗೆ ಪರಮೇಶ್ವರ್ ಸ್ಫೋಟಕ ಹೇಳಿಕೆ

Rain Alert, ದೇಶದ ಈ ಭಾಗಕ್ಕೆ ಚಂಡಮಾರುತ ಅಪ್ಪಳಿಸುವ ಮುನ್ಸೂಚನೆ

ಬಿಹಾರದಲ್ಲೂ ಇಂಡಿಯಾ ಒಕ್ಕೂಟದ ಫ್ರೀ ಗ್ಯಾರಂಟಿ ಆಫರ್

ಆರ್ ಎಸ್ಎಸ್ ವಿರುದ್ಧ ಸರ್ಕಾರದ ಕುತಂತ್ರಕ್ಕೆ ತಕ್ಕ ಉತ್ತರ ಸಿಕ್ಕಿದೆ: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments