ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತೋರಿಕೆಗಾಗಿ ಲಿಂಗಾಯತ ಮಠಕ್ಕೆ ಹೋಗುತ್ತಿದ್ದಾರಲ್ಲ ಅವರಿಗೆ ಧನ್ಯವಾದಗಳು ಅಂತಾ ರಾಹುಲ್ ಗಾಂಧಿ ವಿರುದ್ದ ಸಿಎಂ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ ಅವರು, ರಾಜ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ, ಪ್ರಧಾನಿ ನರೇಂದ್ರ ಮೋದಿ, ಸೃತಿ ಇರಾನಿ ಸೇರಿದಂತೆ ಹಲವು ನಾಯಕರು ಬರ್ತಾರೆ. ಸಿಎಂ ಆಗಬೇಕು ಎಂದು ನಾನು ಅಂದುಕೊಂಡಿರಲಿಲ್ಲ. ಅದನ್ನ ಹೈಕಮಾಂಡ್ ತೀರ್ಮಾನ ಮಾಡಿದ್ದು... ಈಗಲೂ ಕೂಡ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಬಿಜೆಪಿ ಹೈಕಮಾಂಡ್ ಎಲ್ಲವನ್ನು ಗಮನಿಸುತ್ತಿದೆ ಅಂತಾ ಸಿಎಂ ತಿಳಿಸಿದ್ರು.. ಇನ್ನು ಭಾವನೆಗಳ ಜೊತೆ BJP ಆಟವಾಡುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ್ರು.. ಲಿಂಗಾಯತ, ಮತ್ತೊಂದು ವಿವಾದಗಳನ್ನು ತೆಗೆದಿದ್ದೇ ಅವರು. ಡಿ.ಕೆ ಶಿವಕುಮಾರ್ ಹೇಳುವುದು ಒಂದು, ಮಾಡೋದು ಇನ್ನೊಂದು. ದೇವರು ಯಾರಿಗೆ ಆಶೀರ್ವಾದ ಮಾಡುತ್ತಾರೆ ಎಂದು ಕಾದುನೋಡೋಣ ಎಂದು ಡಿಕೆಶಿಗೆ ಸಿಎಂ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.