ಬೆಂಗಳೂರು ನಗರದಲ್ಲಿ ಹಾನಿಗೀಡಾದ ಪ್ರದೇಶಗಳಿಗೆ ಇಂದು ಸಿಎಂ ಭೇಟಿ ನೀಡಲಿದ್ದು, ಪರಿಶೀಲನೆ ನಡೆಸಿದ ಬಳಿಕ ಸ್ಥಳದಲ್ಲಿಯೇ ಅಗತ್ಯ ಸೂಚನೆ ನೀಡಲಿದ್ದಾರೆ. ಈ ಕುರಿತು ಖುದ್ದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಳೂರು ನಗರದಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಪ್ರವಾಹ ನಿಯಂತ್ರಣ ಹಾಗೂ ಪರಿಹಾರ ಕಾರ್ಯಗಳ ಕುರಿತು ಗೃಹ ಕಚೇರಿ ಕೃಷ್ಣಾದಲ್ಲಿ ನಿನ್ನೆ ಹಿರಿಯ ಅಧಿಕಾರಿಗಳ ಸಭೆ ನಡೆಸಿದ್ದಾರೆ. ಈ ವೇಳೆ ಸಿಟಿ ರೌಂಡ್ಸ್ ಬಗ್ಗೆ ಮಾಹಿತಿ ನೀಡಿದರು. ಇಂದು ಮಧ್ಯಾಹ್ನ 3.15ಕ್ಕೆ ಬೊಮ್ಮನಹಳ್ಳಿ, ಮಹದೇವಪುರ ವಲಯಕ್ಕೆ ಸಿಎಂ ಬೊಮ್ಮಾಯಿ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಸ್ಥಳದಲ್ಲಿ ಸ್ಥಳೀಯರಿಂದ ಅಹವಾಲು ಸ್ವೀಕರಿಸಿದ ಬಳಿಕ ಸ್ಥಳದಲ್ಲಿಯೇ ಅಗತ್ಯ ಸೂಚನೆ ನೀಡಲಿದ್ದಾರೆ. ಬೆಂಗಳೂರು ಮೂಲಸೌಕರ್ಯದ ಬಗ್ಗೆ ಉದ್ಯಮಿ ಮೋಹನ್ ದಾಸ್ ಟ್ವೀಟ್ ಮಾಡಿದ್ದ ಬೆನ್ನಲ್ಲೇ ಸಿಎಂ ಬೆಂಗಳೂರು ಪ್ರದಕ್ಷಿಣೆಗೆ ಮುಂದಾಗಿದ್ದಾರೆ.
ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!