ಮೀಸಲಾತಿ ಕುರಿತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ನೀಡಿರುವ ಹೇಳಿಕೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ತಿರುಗೇಟು ನೀಡಿದ್ದಾರೆ. ಬೆಂಗಳೂರು: ಮೀಸಲಾತಿ ಕುರಿತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ನೀಡಿರುವ ಹೇಳಿಕೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ತಿರುಗೇಟು ನೀಡಿದ್ದಾರೆ..ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಮೀಸಲಾತಿ ನೀಡಿರುವುದಕ್ಕೆ ಕಾಂಗ್ರೆಸ್ ನಾಯಕರು ಅಕ್ರಮ, ಸಂವಿಧಾನ ವಿರೋಧಿ ಪದ ಬಳಸಿದ್ದಾರೆ ಎಂದು ಕಿಡಿಕಾರಿದರು. ಕಾಂಗ್ರೆಸ್ ವಕ್ತಾರ ಮತ್ತು ರಾಜ್ಯ ಉಸ್ತುವಾರಿ ಸುರ್ಜೇವಾಲ ಟ್ವೀಟ್ ಕುರಿತು ಪ್ರತಿಕ್ರಿಯಿಸಿದ ಬೊಮ್ಮಾಯಿ, ಜನಸಂಖ್ಯೆ ಆಧಾರದ ಮೇಲೆ ಮೀಸಲಾತಿ ನೀಡಲು ಡಾ.ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಅವಕಾಶ ಕಲ್ಪಿಸಿದ್ದರು. ಅದರಂತೆ, ರಾಜ್ಯ ಸರ್ಕಾರ ಎಸ್ಸಿ - ಎಸ್ಟಿ ಸಮುದಾಯಗಳ ಬಹುಕಾಲದ ಬೇಡಿಕೆಯನ್ನು ಈಡೇರಿಸಿದ್ದು, ಸಂವಿಧಾನದ ಒಂಬತ್ತನೇ ಶೆಡ್ಯೂಲ್ಗೆ ಸೇರಿಸಲು ಶಿಫಾರಸು ಮಾಡಿದೆ. ಕಾಂಗ್ರೆಸ್ ಪಕ್ಷಕ್ಕೆ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಮತ್ತು ಅವರು ಬರೆದಿರುವ ಸಂವಿಧಾನದ ಮೇಲೆ ನಂಬಿಕೆ ಇಲ್ಲ ಎಂದು ಕಿಡಿ ಕಾರಿದ್ರು