Publish Date: Sun, 25 Sep 2022 (21:05 IST)
Updated Date: Sun, 25 Sep 2022 (21:07 IST)
ಸಿಎಂ ಬಸವರಾಜ ಬೊಮ್ಮಾಯಿಯನ್ನು ಉದ್ಯಮಿ ಮೋಹನ್ ದಾಸ್ ಪೈ ಭೇಟಿಯಾಗಿ ಮಾತುಕತೆ ನಡೆಸಿದ್ರು. ಸಿಎಂ ರೇಸ್ ಕೋರ್ಸ್ನ ಸರ್ಕಾರಿ ನಿವಾಸದಲ್ಲಿ ಇಬ್ಬರು ಮಾತುಕತೆ ನಡೆಸಿದ್ದಾರೆ. ಮೋಹನ್ ದಾಸ್ ಪೈ ಇತ್ತೀಚೆಗೆ ಬೆಂಗಳೂರಿನ ಮೂಲ ಸೌಕರ್ಯದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು. ಟ್ವೀಟ್ ಮೂಲಕ ಬೆಂಗಳೂರಿನ ಮೂಲಸೌಕರ್ಯದ ಬಗ್ಗೆ ಅಸಮಾಧಾನ ಹೊರಹಾಕಿದ್ದರು. ಹೀಗಾಗಿ ಇಂದು ಮೋಹನ ದಾಸ್ ಪೈ ಜೊತೆಗೆ ಸಿಎಂ ಮಾತುಕತೆ ನಡೆಸಿದ್ರು.