Daily Horoscope
✕

ನಾಳೆ ದೆಹಲಿಗೆ ಸಿಎಂ ಬೊಮ್ಮಾಯಿ

Webdunia
ಸೋಮವಾರ, 28 ನವೆಂಬರ್ 2022 (16:06 IST)
ಸಿಎಂ ಬಸವರಾಜ ಬೊಮ್ಮಾಯಿ ಅವರು ಇಂದು ಸಂಜೆ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ನಾಳೆ, ಅಂದ್ರೆ ಮಂಗಳವಾರ ಪಕ್ಷದ ಹೈಕಮಾಂಡ್ ನಾಯಕರನ್ನು ಭೇಟಿಯಾಗುವ ಸಾಧ್ಯತೆಗಳಿವೆ. ಈ ವೇಳೆ ಸಂಪುಟ ವಿಸ್ತರಣೆ ಮತ್ತು ರಾಜಕೀಯ ವಿದ್ಯಮಾನಗಳ ಬಗ್ಗೆ ಹೈಕಮಾಂಡ್ ನಾಯಕರ ಜೊತೆ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ. ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ನಾಲ್ಕರಿಂದ ಐದು ತಿಂಗಳು ಮಾತ್ರ ಬಾಕಿ ಉಳಿದಿದೆ. ಖಾಲಿ ಉಳಿದಿರುವ ಸಚಿವ ಸ್ಥಾನಗಳನ್ನು ಭರ್ತಿ ಮಾಡಬೇಕು ಎಂಬ ಒತ್ತಡ ಕೇಳಿ ಬರುತ್ತಿರುವ ಬೆನ್ನಲ್ಲೇ ಸಿಎಂ ದೆಹಲಿ ಪ್ರವಾಸ ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಹೀಗಾಗಿ ಸಚಿವ ಸ್ಥಾನದ ಆಕಾಂಕ್ಷಿಗಳಲ್ಲಿ ಟೆನ್ಷನ್ ಶುರುವಾಗಿದೆ. ಒಂದು ವೇಳೆ ಹೈಕಮಾಂಡ್​ ಗ್ರೀನ್ ಸಿಗ್ನಲ್ ನೀಡಿದ್ರೆ ಮುಂದಿನ ವಾರವೇ ಸಂಪುಟ ವಿಸ್ತರಣೆ ಆಗಬಹುದು. ಆದ್ರೆ ಗುಜರಾತ್ ಚುನಾವಣೆಯಲ್ಲಿ ಬಿಜೆಪಿ ಹೈಕಮಾಂಡ್ ನಾಯಕರು ಬ್ಯುಸಿಯಾಗಿರುವ ಕಾರಣ, ಸಂಪುಟ ವಿಸ್ತರಣೆಗೆ ಅನುಮತಿ ಸಿಗೋದು ಅನುಮಾನ ಎನ್ನಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments