Select Your Language

Notifications

webdunia
webdunia
webdunia
webdunia

ರಾಜ್ಯ ಬಜೆಟ್ ಕುರಿತು ದೆಹಲಿಯಲ್ಲಿ ಸಂಸದರ ಜೊತೆ ಸಭೆ ನಡೆಸಲಿರುವ ಸಿಎಂ ಬೊಮ್ಮಾಯಿ

ರಾಜ್ಯ ಬಜೆಟ್ ಕುರಿತು ದೆಹಲಿಯಲ್ಲಿ ಸಂಸದರ ಜೊತೆ ಸಭೆ ನಡೆಸಲಿರುವ ಸಿಎಂ ಬೊಮ್ಮಾಯಿ
bangalore , ಸೋಮವಾರ, 7 ಫೆಬ್ರವರಿ 2022 (21:10 IST)
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೋಮವಾರ ಬೆಳಗ್ಗೆ ದೆಹಲಿಗೆ ಪ್ರಯಾಣಿಸುತ್ತಿದ್ದು, ರಾಜ್ಯದ ಸಂಸದರೊಂದಿಗೆ ಬಜೆಟ್ ಪೂರ್ವಭಾವಿ ಸಭೆ ನಡೆಸಲಿದ್ದಾರೆ.
ಸಿಎಂ ಬೊಮ್ಮಾಯಿ ಎರಡು ದಿನಗಳ ದೆಹಲಿ ಪ್ರವಾಸ ಹಮ್ಮಿಕೊಂಡಿದ್ದಾರೆ. ಬಜೆಟ್‌ಗೆ ಪೂರ್ವಭಾವಿಯಾಗಿ ರಾಜ್ಯದ ಸಂಸದರನ್ನು ಭೇಟಿ ಮಾಡಲಿರುವ ಮುಖ್ಯಮಂತ್ರಿಗಳು ರಾಜ್ಯದ ಹಲವು ಯೋಜನೆಗಳ ಕುರಿತು ಚರ್ಚೆ ಮಾಡಲಿದ್ದಾರೆ.
ನವದೆಹಲಿಯ ಹೋಟೆಲ್‌ ತಾಜ್ ಮಾನ್‌ಸಿಂಗ್‌ನಲ್ಲಿ ಸಂಸದರೊಂದಿಗೆ ಭೇಟಿ ನಿಗದಿಯಾಗಿದೆ. ಮಧ್ಯಾಹ್ನ ಒಂದು ಗಂಟೆಗೆ ಈ ಹೋಟೆಲ್‌ನಲ್ಲಿ ಭೋಜನ ವ್ಯವಸ್ಥೆಯ ಸಮೇತ ರಾಜ್ಯ ಬಜೆಟ್‌ ಕುರಿತು ಚರ್ಚೆ ನಡೆಯುತ್ತದೆ.
ಕೇಂದ್ರ ಬಜೆಟ್ ಆಗಿದ್ದು, ಮುಂದಿನ ತಿಂಗಳು ರಾಜ್ಯ ಬಜೆಟ್ ಇರುವ ಹಿನ್ನೆಲೆಯಲ್ಲಿ ಹಲವಾರು ಯೋಜನೆಗಳ ಬಗ್ಗೆ ಚರ್ಚಿಸಲು ರಾಜ್ಯದ ಸಂಸದರೊಂದಿಗೆ ಸಭೆ ನಡೆಸಲಿದ್ದೇನೆ. ಕೇಂದ್ರ ಹಣಕಾಸು ಸಚಿವರ ಭೇಟಿಗೆ ಸಮಯ ಕೋರಲಾಗಿದೆ. ರಾಜ್ಯ ಬಜೆಟ್, ಹಣಕಾಸಿನ ಪರಿಸ್ಥಿತಿ, ಜಿಎಸ್‌ಟಿ ಸಹಿತ ಇನ್ನಿತರ ವಿಷಯಗಳ ಬಗ್ಗೆ ಚರ್ಚಿಸಲು ಉದ್ದೇಶಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯಾಧ್ಯಂತ ಇಂದು ಉದ್ಘಾಟನೆಯಾಗಬೇಕಿದ್ದ 'ಓಬವ್ವ ಆತ್ಮರಕ್ಷಣೆ ಕಲೆ ತರಬೇತಿ'ಮುಂದೂಡಿಕೆ