ಕಾಲೇಜಿನಲ್ಲಿ ಭೌತಿಕ ತರಗತಿಗಳು ನಡೆಯುತ್ತಿದ್ದ ಕೊಠಡಿಗಳಿಗೆ ಸಿಎಂ ಭೇಟಿ ನೀಡಿದ್ದರು. ಕೋವಿಡ್ 19 ನಿಯಂತ್ರಣ ಹಿನ್ನೆಲೆಯಲ್ಲಿ ಕೈಗೊಳ್ಳಲಾಗಿರುವ ಸಿದ್ಧತೆಗಳನ್ನು ಪರಿಶೀಲಿಸಿದರು. ಯಾವುದೇ ಆತಂಕ ಇಲ್ಲದೆ ಕಾಲೇಜಿಗೆ ಬನ್ನಿ ಎಂದು ಅವರು ವಿದ್ಯಾರ್ಥಿಗಳಿಗೆ ಆಹ್ವಾನಿಸಿದರು. ಕಾಲೇಜು ಆವರಣದಲ್ಲಿ ಸಿಎಂ ಸಸಿ ನೆಟ್ಟು ನೀರು ಹಾಕಿದರು.
ಡಾ. ಅಶ್ವಥ್ ನಾರಾಯಣ ಫೌಂಡೇಶನ್ ವತಿಯಿಂದ ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ಶಿಕ್ಷಣ ಸಚಿವರಾದ ಬಿ ಸಿ ನಾಗೇಶ್, ಉನ್ನತ ಶಿಕ್ಷಣ ಸಚಿವರಾದ ಅಶ್ವಥನಾರಾಯಣ ಉಪಸ್ಥಿತರಿದ್ದರು.