Select Your Language

Notifications

webdunia
webdunia
webdunia
webdunia

ಒಟ್ಟಾಗಿ ಕೆಲಸ ಮಾಡಿದರೆ ಲಾಭ ಸಿಎಂ ಬೊಮ್ಮಾಯಿ

webdunia
bangalore , ಭಾನುವಾರ, 1 ಜನವರಿ 2023 (18:42 IST)
ನಂದಿನಿನಂದಿನಿ ತನ್ನ ಪ್ರತ್ಯೇಕ  ಅಸ್ತಿತ್ವವನ್ನು ಸದಾ ಕಾಯ್ದುಕೊಳ್ಳಲಿದೆ ಎಂದು  ಸಿಎಂ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ... ಆರ್ ಟಿ ನಗರದಲ್ಲಿ ಮಾತನಾಡಿದ ಅವರು,ನಂದಿನಿಯನ್ನು ಅಮುಲ್ ನೊಂದಿಗೆ ವಿಲೀನ ಮಾಡುತ್ತಾರೆ ಎನ್ನುವುದು ತಪ್ಪು ಕಲ್ಪನೆ. ಯಾರೂ ಊಹೆ ಮಾಡಿ ಟೀಕೆ ಮಾಡಬಾರದು. ಕೇಂದ್ರ ಗೃಹ ಮತ್ತು ಸಹಕಾರ ಸಚಿವರು ಮಾತನಾಡಿರುವುದು ಸ್ಪಷ್ಟವಾಗಿದೆ.  ಒಬ್ಬರಿಗೊಬ್ಬರು ಸಹಕಾರದಿಂದ ನಂದಿನಿ ಮತ್ತು ಅಮುಲ್ ತಾಂತ್ರಿಕ ವಾಗಿ, ಮಾರುಕಟ್ಟೆಯಲ್ಲಿ ಸಹಕಾರ ಮಾಡಬೇಕು. ಇವೆರಡೂ ದೊಡ್ಡ ಸಂಸ್ಥೆಗಳು. ಪೂರಕವಾಗಿ ಕೆಲಸ ಮಾಡಬೇಕು. ಅದರರ್ಥ ವಿಲೀನಗೊಳಿಸುವುದು ಎಂದಲ್ಲ. ನಂದಿನಿ ಅಸ್ತಿತ್ವ  ನೂರಾರು ವರ್ಷ ಶಾಶ್ವತವಾಗಿ ಇರಲಿದೆ ಎಂದರು.ಆಡಳತಾತ್ಮಕ ಕ್ರಮಗಳನ್ನು ವಿನಿಮಯ ಮಾಡಿಕೊಳ್ಳಿ ಎಂದು ಅವರು ಹೇಳಿರುವುದು. ಅದರ ತಪ್ಪು ಅರ್ಥ ಕಲ್ಪಿಸುವ ಅಥವಾ ರಾಜಕಾರಣ ಮಾಡುವ ಅವಶ್ಯಕತೆ ಇಲ್ಲ. ನಾನು ಮುಖ್ಯಮಂತ್ರಿಯಾಗಿ ಹೇಳುವುದು, ನಂದಿನಿ ತನ್ನ ಪ್ರತ್ಯೇಕ  ಅಸ್ತಿತ್ವವನ್ನು ಸದಾ ಕಾಯ್ದುಕೊಳ್ಳಲಿದೆ ಎಂದರು. 
 

Share this Story:

Follow Webdunia kannada

ಮುಂದಿನ ಸುದ್ದಿ

ಮಲ್ಲಿಕಾರ್ಜುನ ಖರ್ಗೆ ಭೇಟಿ ಮಾಡಿದ ಡಿಕೆಶಿ