ಗಡಿ ವಿವಾದ ಮಾತುಕತೆಯ ಮೂಲಕ ಬಗೆಹರಿಸಿಕೊಳ್ಳೋಣ ಎಂಬ ಮಹಾ ಸಿಎಂ ಏಕನಾಥ್ ಶಿಂಧೆ ಹೇಳಿಕೆ ಸಿಎಂ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.ಏಕನಾಥ್ ಶಿಂಧೆ ಅವರ ಹೇಳಿಕೆಯನ್ನು ಗಮನಿಸಿದ್ದೇನೆ.ಏಕನಾಥ್ ಶಿಂಧೆ ಅವರ ಈ ಹೇಳಿಕೆ ಬಗ್ಗೆ ಚರ್ಚಿಸಲು ಸರ್ವಪಕ್ಷ ಸಭೆ ಕರೆಯುತ್ತೇವೆ. ಮುಂದಿನ ವಾರ ಸರ್ವಪಕ್ಷ ಸಭೆ ಕರೆದು ಚರ್ಚಿಸುತ್ತೇವೆ.ಸುಪ್ರೀಂಕೋರ್ಟಿನಲ್ಲಿ ಅವರೇ ದಾವೆ ಹೂಡಿದ್ದಾರೆ.ನಾವು ನಮ್ಮ ವಾದ ಮಂಡನೆಗೆ ಸಮರ್ಥವಾಗಿ ತಯಾರಿ ಮಾಡಿಕೊಂಡಿದ್ದೇವೆ..ಈ ಮಧ್ಯೆ ಮಹಾರಾಷ್ಟ್ರ ಸಿಎಂ ಅವರು ಮಾತುಕತೆ ನಡೆಸುವ ಕುರಿತು ಹೇಳಿಕೆ ಕೊಟ್ಟಿದ್ದಾರೆ.ಸುಪ್ರೀಂಕೋರ್ಟ್ ನಲ್ಲಿ ವಾದ ಮಾಡುವ ಬಗ್ಗೆ ಈಹಿಂದಿನ ಸರ್ವಪಕ್ಷ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿತ್ತು.ಸದ್ಯಕ್ಕೆ ನಮ್ಮ ಮುಂದೆ ಸುಪ್ರೀಂ ಕೋರ್ಟ್ ಮುಂದೆ ವಾದ ಮಂಡಿಸುವ ಉದ್ದೇಸ ಒಂದೇ ಇದೆ.ಮಾತುಕತೆ ಮೂಲಕ ಬಗೆಹರಿಸಿಕೊಳ್ಳುವ ಏಕನಾಥ್ ಶಿಂಧೆ ಅವರ ಹೇಳಿಕೆ ಬಗ್ಗೆ ಸರ್ವ ಪಕ್ಷ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಮಾಡ್ತೇವೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ