ಕಾಂಗ್ರೆಸ್ ನಾಯಕರ ವಿರುದ್ಧ ಎಫ್. ಐ. ಆರ್. ಸಿಎಂ ಬೊಮ್ಮಾಯಿ ಸೂಚನೆ

Webdunia
ಭಾನುವಾರ, 9 ಜನವರಿ 2022 (15:55 IST)
toಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿ ಪಾದಯಾತ್ರೆ ನಡೆಸಿರುವ ಕಾಂಗ್ರೆಸ್ ನಾಯಕರ ವಿರುದ್ಧ ದೂರು ದಾಖಲಿಸಲು ರಾಮನಗರ ಜಿಲ್ಲಾಡಳಿತಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ.ಇಂದಿನ ಪಾದಯಾತ್ರೆಯಲ್ಲಿ ಯಾರೆಲ್ಲ ಭಾಗಿಯಾಗಿದ್ದಾರೋ ಅವರೆಲ್ಲರ ವಿರುದ್ಧ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆಯಡಿ ದೂರು ದಾಖಲಿಸುವಂತೆ ಜಿಲ್ಲಾಡಳಿತಕ್ಕೆ ಆದೇಶಿಸಿದ್ದಾರೆ.
ಕಾಂಗ್ರೆಸ್‍ನವರ ಪಾದಯಾತ್ರೆಯನ್ನು ತಡೆಯುವುದಿಲ್ಲ. ಆದರೆ ನಿಯಮ ಉಲ್ಲಂಘಿಸಿದವರ ವಿರುದ್ಧ ದೂರು ದಾಖಲಿಸದೆ ಬಿಡುವುದಿಲ್ಲ. ಕಾನೂನು ಪ್ರಕಾರವಾಗಿ ಜಿಲ್ಲಾಡಳಿ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದ್ದಾರೆ.
 
ರೇಸ್‍ಕೋರ್ಸ್ ರಸ್ತೆಯ ಸರ್ಕಾರಿ ನಿವಾಸದಲ್ಲಿ ಬೊಮ್ಮಾಯಿ ಅವರೊಂದಿಗೆ ಸಚಿವರಾದ ಅರಗ ಜ್ಞಾನೇಂದ್ರ, ಸುಧಾಕರ್, ಭೈರತಿ ಬಸವರಾಜ್, ಎಸ್.ಟಿ.ಸೋಮಶೇಖರ್ ಸೇರಿದಂತೆ ಹಲವು ಸಚಿವರ ಜೊತೆ ಸಭೆ ನಡೆಸಿದರು. ಕಾಂಗ್ರೆಸ್ ನಾಯಕರು ಮೇಕೆದಾಟು ಪಾದಯಾತ್ರೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಕಾನೂನು ಕ್ರಮಗಳ ಕುರಿತಾಗಿ ಮಾತುಕತೆ ನಡೆಸಿದರು.
 
ಒಂದು ಕಡೆ ಹೆಚ್ಚುತ್ತಿರುವ ಕೋವಿಡ್ ಸೋಂಕು ತಡೆಗಟ್ಟಲು ಸರ್ಕಾರ ವೀಕೆಂಡ್ ಕಫ್ರ್ಯೂ ಜಾರಿಗೊಳಿಸಿರುವುದು ಮತ್ತೊಂದು ಕಡೆ ಕಾಂಗ್ರೆಸ್ ಪಾದಯಾತ್ರೆ ನಡೆಸುತ್ತಿರುವುದರಿಂದ ಸರ್ಕಾರ ಗೊಂದಲಕ್ಕೆ ಸಿಲುಕಿದೆ.ಸಣ್ಣಪುಟ್ಟ ನಿಯಮಗಳನ್ನು ಉಲ್ಲಂಘಿಸಿದರೆ ಸಾರ್ವಜನಿಕರಿಗೆ ದಂಡ ಹಾಕಲಾಗುತ್ತದೆ. ಆದರೆ ಕಾಂಗ್ರೆಸ್ ಪಾದಯಾತ್ರೆಯಲ್ಲಿ ಸೇರಿರುವ ಜನಸ್ತೋಮ, ಮಾಸ್ಕ್ ಹಾಕದಿರುವುದು, ಸಾಮಾಜಿಕ ಅಂತರ ಕಾಪಾಡದಿರುವುದು, ಸ್ಯಾನಿಟೈಸ್ ಬಳಕೆ ಮಾಡದಿರುವುದು ಸೇರಿದಂತೆ ಮಾರ್ಗಸೂಚಿಗಳನ್ನು ಉಲ್ಲಂಘನೆ ಮಾಡಿರುವ ಹಿನ್ನೆಲೆಯಲ್ಲಿ ಸರ್ಕಾರದ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಚರ್ಚೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರಿನಲ್ಲೇ 3 ಲಕ್ಷ ಅಕ್ರಮ ಬಾಂಗ್ಲಾ ವಲಸಿಗರು: ಆರ್ ಅಶೋಕ್ ಶಾಕಿಂಗ್ ಮಾಹಿತಿ

ಕುರ್ಚಿ ಫೈಟ್ ನಿವಾರಣೆಗೆ ಹೈಕಮಾಂಡ್ ಅಖಾಡಕ್ಕೆ: ಈಗೆಲ್ಲಿದ್ದಾರೆ ರಾಹುಲ್ ಗಾಂಧಿ

ಡಿಕೆ ಶಿವಕುಮಾರ್ ಗೆ ಪಟ್ಟ ಕಟ್ಟಲು ಕೈ ಹೈಕಮಾಂಡ್ ಗೆ ಕಾಡುತ್ತಿರುವ ಭಯ ಯಾವುದು ಗೊತ್ತಾ

ಎಲ್ಲಾ ಹೈಕಮಾಂಡ್ ನಿರ್ಧರಿಸುತ್ತದೆ ಎಂದ ಮಲ್ಲಿಕಾರ್ಜುನ ಖರ್ಗೆ: ಹಾಗಿದ್ರೆ ನೀವ್ಯಾರು ಎಂದು ಪ್ರಶ್ನಿಸಿದ ಪಬ್ಲಿಕ್

Karnataka Weather: ರಾಜ್ಯದಲ್ಲಿ ಈ ವಾರವೂ ಮಳೆಯಿರುತ್ತಾ ಇಲ್ಲಿದೆ ಹವಾಮಾನ ವರದಿ

ಮುಂದಿನ ಸುದ್ದಿ
Show comments