Publish Date: Sat, 29 Oct 2022 (15:22 IST)
Updated Date: Sat, 29 Oct 2022 (15:25 IST)
ನಗುಮೊಗದ ಸರದಾರ ಪುನೀತ್ ರಾಜ್ಕುಮಾರ್ ಪುಣ್ಯಸ್ಮರಣೆ ಹಿನ್ನೆಲೆ, ಸಿಎಂ ಬಸವರಾಜ ಬೊಮ್ಮಾಯಿ ಅಪ್ಪುರನ್ನು ನೆನೆದಿದ್ದಾರೆ. ಟ್ವೀಟ್ ಮೂಲಕ ಸಂದೇಶ ರವಾನಿಸಿರುವ ಅವರು, ಬಾಲನಟನಾಗಿ ಚಿತ್ರರಂಗ ಪ್ರವೇಶಿಸಿ, ಪವರ್ ಸ್ಟಾರ್ ಆಗಿ ಕನ್ನಡಿಗರ ಜನಮಾನಸದಲ್ಲಿ ಶಾಶ್ವತ ಸ್ಥಾನ ಪಡೆದಿರುವ ಪ್ರೀತಿಯ ಅಪ್ಪು, ಡಾಕ್ಟರ್ ಪುನೀತ್ ರಾಜಕುಮಾರ್ ರವರ ಪುಣ್ಯಸ್ಮರಣೆಯಂದು ಅವರಿಗೆ ಪ್ರೀತಿ ಪೂರ್ವಕ ನಮನಗಳು. ಅತಿ ಚಿಕ್ಕ ವಯಸ್ಸಿನಲ್ಲಿ ಅವರು ಮಾಡಿದ ಸಾಧನೆ, ಗಳಿಸಿದ ಜನಪ್ರಿಯತೆ, ಕೈಗೊಂಡ ಜನಸೇವೆಯನ್ನು ವರ್ಣಿಸಲು ಪದಗಳೇ ಸಾಲದು.