ಶಾಸಕ ರಾಜುಗೌಡರಿಗೆ ಸಿಎಂ ಕ್ಲಾಸ್

Webdunia
ಭಾನುವಾರ, 9 ಅಕ್ಟೋಬರ್ 2022 (16:55 IST)
ಪರಿಶಿಷ್ಟ ಜಾತಿಗೆ ಮೀಸಲಾತಿ ಪ್ರಮಾಣ ಹೆಚ್ಚಾಗಲು ನ್ಯಾಯಮೂರ್ತಿ ನಾಗಮೋಹನ್ ದಾಸ್ ಹಾಗೂ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ ಅವರ ಶ್ರಮ ದೊಡ್ಡದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ವಾಲ್ಮೀಕಿ ಜಯಂತಿ ಸಮಾರಂಭದಲ್ಲಿ ಮಾತನಾಡಿದ ಅವರು, ಎಸ್​ಟಿ ಸಮುದಾಯ ಮೀಸಲಾತಿ ಹೆಚ್ಚಳಕ್ಕೆ ಸಂಪುಟ ಒಪ್ಪಿಗೆ ಕುರಿತು ಪ್ರತಿಕ್ರಿಯಿಸಿ, ಇದು ಹೋರಾಟದ ಗೆಲುವು. ಶ್ರೀಗಳ ಆಶೀರ್ವಾದದಿಂದ ಸಿಕ್ಕ ಗೆಲುವು ಎಂದು ಬಣ್ಣಿಸಿದರು. ಮುಂಬರುವ ಸವಾಲು ಎದುರಿಸಲು ನಿಮ್ಮ ಆಶೀರ್ವಾದ ಬೇಕು. ನಿಮ್ಮ ಆಶೀರ್ವಾದ ಸಿಗುತ್ತೆ ಎಂಬ ವಿಶ್ವಾಸವಿದೆ. ವಿಧಾನಸೌಧದ ಮುಂದೆ ನಿಂತು ಈ ಮಾತು ಹೇಳುತ್ತಿದ್ದೇನೆ. ನ್ಯಾಯ ಸಮ್ಮತ ತೀರ್ಮಾನ ತೆಗೆದುಕೊಳ್ಳಲು ಸಹಕಾರ ಇರಲಿ ಎಂದು ಮನವಿ ಮಾಡಿದರು.
 
ಸಚಿವ ಶ್ರೀರಾಮುಲು ಮತ್ತು ಶಾಸಕ ರಾಜೂ ಗೌಡ ನನಗೆ ಶ್ರೀರಾಮಚಂದ್ರ ಎಂದಿದ್ದಾರೆ. ಆದರೆ ನಾನು ಶ್ರೀರಾಮಚಂದ್ರನ ಪಾದದ ದೂಳಿಗೂ ಸಮನಲ್ಲ. ದಯವಿಟ್ಟು ಹಾಗೆಲ್ಲ ಹೇಳಬೇಡಿ, ಶ್ರೀರಾಮನಿಗೆ ಯಾರೂ ಸರಿಸಾಟಿಯಲ್ಲ. ನ್ಯಾಯ, ನೀತಿ ಮತ್ತು ನಡತೆಯಲ್ಲಿ ಶ್ರೀರಾಮಚಂದ್ರ ಒಬ್ಬನೇ, ಅವನು ದೊಡ್ಡ ಆದರ್ಶ ಪುರುಷ ಎಂದರು.
 
ತಮ್ಮನ್ನು ಹೊಗಳಿದ ಶಾಸಕ ರಾಜೂಗೌಡ ಅವರನ್ನು ತರಾಟೆಗೆ ತೆಗೆದುಕೊಂಡ ಅವರು, ನೀನು ತಪ್ಪು ಮಾತಾಡಿದ್ಯಲೇ ರಾಜೂಗೌಡ. ನೀನು ಯಾರಿಗೂ ಗುಲಾಮ ಆಗಬೇಕಿಲ್ಲ. ಬದುಕು ಕೊಟ್ಟ ದೈವಕ್ಕೆ ಮಾತ್ರ ಗುಲಾಮನಾಗಬೇಕು. ಅಪ್ಪಿತಪ್ಪಿ ಇನ್ನೊಮ್ಮೆ ಆ ಶಬ್ದ ಬಂದರೆ ನಿನ್ನ ನಾನು ಬಿಡಲ್ಲ ಎಂದು ನಗುತ್ತಲೇ ಎಚ್ಚರಿಸಿದರು. ಪಾಪ ಅವನು ಭಾವನಾತ್ಮಕವಾಗಿ ಹೇಳಿದ್ದಾನೆ. ಆದರೆ ಭಾವನಾತ್ಮಕತೆಯ ಜೊತೆಗೆ ವಾಸ್ತವಾಂಶ ಮರೆಯಬಾರದು. ಮೀಸಲಾತಿ ಕೊಟ್ಟಿದ್ದು ನಾನಲ್ಲ, ರಾಜ್ಯದ ಜನತೆ. ಇದರ ಹಿಂದೆ ಬುದ್ಧ, ಬಸವ, ವಾಲ್ಮೀಕಿ ಅವರಂಥ ಮಹಾತ್ಮರ ಶಕ್ತಿಯಿದೆ. ಕೇವಲ ಬಾಯಿ ಮಾತಿನಿಂದ ಯಾವುದೇ ಕೆಲಸ ಆಗುವುದಿಲ್ಲ. ಅದಕ್ಕೆ ಬದ್ಧತೆ ಇರಬೇಕು ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ

ಕನ್ನಡ ಮಾತನಾಡು ಎಂದಿದ್ದಕ್ಕೆ ಹಿಂದಿ ಇಡೀ ದೇಶದಲ್ಲಿದೆ ನಡಿ ಇಲ್ಲಿಂದ ಎಂದು ನಿಂದಿಸಿದ ಮಹಿಳೆ Video

ಮಂಗಳೂರಿನ ಉಳ್ಳಾಲದಲ್ಲಿ ನಡೆದ ಭಯಾನಕ ಆಕ್ಸಿಡೆಂಟ್ ವಿಡಿಯೋ ಇಲ್ಲಿದೆ Video

ಮಾಹಿತಿ ಹಕ್ಕು ಅರ್ಜಿ, ಆರ್ ಟಿಐ ಆನ್ ಲೈನ್ ಅರ್ಜಿ, ಆರ್ ಟಿಐ ಕಾಯ್ದೆ ಎಂದರೇನು

ಮುಂದಿನ ಸುದ್ದಿ
Show comments