Select Your Language

Notifications

webdunia
webdunia
webdunia
webdunia

ಇಂದು ಮಧ್ಯಾಹ್ನ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಕರೆದ ಸಿಎಂ ಬಿಎಸ್ ವೈ

ಇಂದು ಮಧ್ಯಾಹ್ನ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಕರೆದ ಸಿಎಂ ಬಿಎಸ್ ವೈ
ಬೆಂಗಳೂರು , ಭಾನುವಾರ, 28 ಜುಲೈ 2019 (11:03 IST)
ಬೆಂಗಳೂರು : ಸೋಮವಾರದ ಅಧಿವೇಶನದಲ್ಲಿ ಸಿಎಂ ಬಿ.ಎಸ್​. ಯಡಿಯೂರಪ್ಪ ಬಹುಮತ ಸಾಬೀತುಪಡಿಸುತ್ತಿರುವ ಹಿನ್ನಲೆಯಲ್ಲಿ ಇಂದು ಮಧ್ಯಾಹ್ನ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ.

 



ನಾಳೆ ಬಹುಮತ ಸಾಬೀತಿನ ವೇಳೆ ಎಲ್ಲಾ ಶಾಸಕರು ಹಾಜರಾಗಿರುವಂತೆ ಸೂಚಿಸಲು ಈ ಸಭೆ ಕರೆಯಲಾಗಿದೆ ಎನ್ನಲಾಗಿದೆ. ಹಾಗೇ ಇಂದು ಎಲ್ಲ ಬಿಜೆಪಿ ಶಾಸಕರಿಗೆ ವಿಪ್ ಜಾರಿಗೊಳಿಸುವ ಸಾಧ್ಯತೆಯೂ ಇದೆ ಎನ್ನಲಾಗಿದೆ.


ಅಲ್ಲದೇ ಸಭೆ ಬಳಿಕ ಶಾಸಕರಿಗೆ ಖಾಸಗಿ ಹೋಟೆಲ್​ನಲ್ಲಿ ವಾಸ್ತವ್ಯಕ್ಕೆ ವ್ಯವಸ್ಥೆ ಮಾಡಲಾಗಿದೆ. ಬಿಜೆಪಿಯ ಕೆಲವು ಶಾಸಕರು ಕಾಂಗ್ರೆಸ್​- ಜೆಡಿಎಸ್​ ನಾಯಕರ ಸಂಪರ್ಕದಲ್ಲಿರುವ ಬಗ್ಗೆ ಈಗಾಗಲೇ ಸುದ್ದಿಗಳು ಹರಿದಾಡುತ್ತಿರುವ ಹಿನ್ನೆಲೆಯಲ್ಲಿ ಶಾಸಕರು ಆಪರೇಷನ್ ಹಸ್ತಕ್ಕೆ ಒಳಗಾಗದೆ ಇರುವಂತೆ ಎಚ್ಚರಿಕೆ ವಹಿಸಲು ಹಾಗೂ ನಾಳೆ ಎಲ್ಲಾ  ಶಾಸಕರೂ ಗೈರಾಗದೆ  ಅಲ್ಲಿಂದಲೇ ನೇರವಾಗಿ ವಿಧಾನಸೌಧಕ್ಕೆ ಬರಲಿ ಎಂದು ಈ ತೀರ್ಮಾನಕ್ಕೆ ಬರಲಾಗಿದೆ ಎನ್ನಲಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಮೋದಿಯಷ್ಟೆ ಪವರ್ ಪುಲ್ ವ್ಯಕ್ತಿ ಸಿಎಂ ಯಡಿಯೂರಪ್ಪ- ಕೆ.ಎನ್.ರಾಜಣ್ಣ