Publish Date: Sun, 28 Oct 2018 (16:14 IST)
Updated Date: Sun, 28 Oct 2018 (16:16 IST)
ಉಪಚುನಾವಣೆ ಕಾವು ರಂಗೇರುತ್ತಿದ್ದು, ಚುನಾವಣಾ ಪ್ರಚಾರದಲ್ಲಿ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ನಾಯಕರು ಸಕ್ರಿಯರಾಗಿದ್ದಾರೆ. ಏತನ್ಮಧ್ಯೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಶಿವಮೊಗ್ಗದಲ್ಲಿ ಮೊಕ್ಕಾಂ ಹೂಡಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರ ಕ್ಷೇತ್ರದಲ್ಲಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ.
ಜೆಡಿಎಸ್ ಅಭ್ಯರ್ಥಿ ಪರ ಮತಯಾಚನೆ ಮಾಡಿದ್ದಾರೆ. ಮಂಡ್ಯ, ರಾಮನಗರ ಕ್ಷೇತ್ರಗಳಲ್ಲಿ ಪ್ರಚಾರ ನಡೆಸಿರುವ ಸಿಎಂ, ಈಗ ಶಿವಮೊಗ್ಗದಲ್ಲಿ ಮತಬೇಟೆ ಶುರುವಿಟ್ಟುಕೊಂಡಿದ್ದಾರೆ.
ಶಿವಮೊಗ್ಗದ ವಿವಿಧ ಕಡೆ ಜೆಡಿಎಸ್ ಆಯೋಜಿಸಿದ್ದ ಪ್ರಚಾರ ಸಭೆಗಳಲ್ಲಿ ಪಾಲ್ಗೊಂಡು ಮತಯಾಚನೆ ಮಾಡಿದರು.