ಬೆಂಗಳೂರು: ಸಿಎಂ ಕುರ್ಚಿ ವಿಚಾರವಾಗಿ ಸೈಲೆಂಟ್ ಆಗಿದ್ದ ಸಿಎಂ ಸಿದ್ದರಾಮಯ್ಯ ನಾನೇ ಐದು ವರ್ಷ ಸಿಎಂ ಎಂದಿದ್ದ ವಿಚಾರವಾಗಿ ಇದೀಗ ಡಿಕೆಶ ಶಿವಕುಮಾರ್ ಅವರು ಪ್ರತಿಕ್ರಿಯಿಸಿ, ಸೂಕ್ತ ಸಮಯದಲ್ಲಿ ಇಬ್ಬರನ್ನೂ ಕರೆಯಿಸುವುದಾಗಿ ಹೈಕಮಾಂಡ್ ಹೇಳಿದೆ ಎಂದರು.
ಸುದ್ದಿಗಾರರ ಪ್ರಶ್ನೆಗೆ ಶನಿವಾರ ಪ್ರತಿಕ್ರಿಯಿಸಿದ ಶಿವಕುಮಾರ್, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ನನ್ನನ್ನು ಸೂಕ್ತ ಸಮಯದಲ್ಲಿ ಕರೆಯಿಸುತ್ತೇವೆ ಎಂದು ಹೈಕಮಾಂಡ್ ನಾಯಕರು ನಮಗಿಬ್ಬರಿಗೂ ಹೇಳಿದ್ದಾರೆ ಎಂದರು.
ದೆಹಲಿ ನಾಯಕರು ನಿಮಗೆ ಆಹ್ವಾನ ನೀಡಿದ್ದಾರೆಯೇ ಎಂಬ ಮಾಧ್ಯಮದವರ ಪ್ರಶ್ನೆಗೆ, ಕರೆದಾಗ ನಾವು ಹೋಗುತ್ತೇವೆ ಎಂದು ಹೇಳಿದರು.
ಡಿಕೆ ಶಿವಕುಮಾರ್ ಅವರು ಅಂಕೋಲಾ ಹಾಗೂ ಗೋಕರ್ಣದಲ್ಲಿ ಮಾತನಾಡಿದ್ದ ಶಿವಕುಮಾರ್, ನನ್ನ ಮತ್ತು ಸಿದ್ದರಾಮಯ್ಯ ನಡುವೆ ಒಪ್ಪಂದ ಆಗಿದೆ. ಹೈಕಮಾಂಡ್ ಅವರ ಪರವಾಗಿದ್ದ ಕಾರಣಕ್ಕೆ ಅವರು ಮುಖ್ಯಮಂತ್ರಿಯಾಗಿದ್ದಾರೆ ಎಂದು ಹೇಳುವ ಮೂಲಕ ಮೊದಲ ಬಾರಿ ಈ ಬಗ್ಗೆ ಹೇಳಿಕೆ ನೀಡಿದ್ದರು.
ಇದರ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರು ಅಧಿವೇಶನದಲ್ಲಿ ನಾನೇ ಸಿಎಂ ಎಂದು ಹೇಳುವ ಮೂಲಕ ಹೊಸ ಬಾಂಬ್ ಸಿಡಿಸಿದ್ದರು. ಈ ಬಳಿಕ ಇದೀಗ ಮತ್ತೇ ಸಿಎಂ ಕುರ್ಚಿ ಬಗ್ಗೆ ಕೈ ನಾಯಕರ ನಡುವೆ ಚರ್ಚೆ ಶುರುವಾಗಿದೆ.