ಸಿಎಂ ಕುರ್ಚಿ ಚರ್ಚೆ: ಮಹತ್ವದ ವಿಚಾರ ಹಂಚಿಕೊಂಡ ಡಿಕೆ ಶಿವಕುಮಾರ್

Sampriya
ಭಾನುವಾರ, 21 ಡಿಸೆಂಬರ್ 2025 (11:41 IST)
ಬೆಂಗಳೂರು: ಸಿಎಂ ಕುರ್ಚಿ ವಿಚಾರವಾಗಿ ಸೈಲೆಂಟ್‌ ಆಗಿದ್ದ ಸಿಎಂ ಸಿದ್ದರಾಮಯ್ಯ ನಾನೇ ಐದು ವರ್ಷ ಸಿಎಂ ಎಂದಿದ್ದ ವಿಚಾರವಾಗಿ ಇದೀಗ ಡಿಕೆಶ ಶಿವಕುಮಾರ್ ಅವರು ಪ್ರತಿಕ್ರಿಯಿಸಿ, ಸೂಕ್ತ ಸಮಯದಲ್ಲಿ ಇಬ್ಬರನ್ನೂ ಕರೆಯಿಸುವುದಾಗಿ ಹೈಕಮಾಂಡ್ ಹೇಳಿದೆ ಎಂದರು. 

ಸುದ್ದಿಗಾರರ ಪ್ರಶ್ನೆಗೆ ಶನಿವಾರ ಪ್ರತಿಕ್ರಿಯಿಸಿದ ಶಿವಕುಮಾರ್,  ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ನನ್ನನ್ನು ಸೂಕ್ತ ಸಮಯದಲ್ಲಿ ಕರೆಯಿಸುತ್ತೇವೆ ಎಂದು ಹೈಕಮಾಂಡ್ ನಾಯಕರು ನಮಗಿಬ್ಬರಿಗೂ ಹೇಳಿದ್ದಾರೆ ಎಂದರು.

ದೆಹಲಿ ನಾಯಕರು ನಿಮಗೆ ಆಹ್ವಾನ ನೀಡಿದ್ದಾರೆಯೇ ಎಂಬ ಮಾಧ್ಯಮದವರ ಪ್ರಶ್ನೆಗೆ, ಕರೆದಾಗ ನಾವು ಹೋಗುತ್ತೇವೆ ಎಂದು ಹೇಳಿದರು.

ಡಿಕೆ ಶಿವಕುಮಾರ್ ಅವರು ಅಂಕೋಲಾ ಹಾಗೂ ಗೋಕರ್ಣದಲ್ಲಿ ಮಾತನಾಡಿದ್ದ ಶಿವಕುಮಾರ್‌,  ನನ್ನ ಮತ್ತು ಸಿದ್ದರಾಮಯ್ಯ ನಡುವೆ ಒಪ್ಪಂದ ಆಗಿದೆ. ಹೈಕಮಾಂಡ್ ಅವರ ಪರವಾಗಿದ್ದ ಕಾರಣಕ್ಕೆ ಅವರು ಮುಖ್ಯಮಂತ್ರಿಯಾಗಿದ್ದಾರೆ ಎಂದು ಹೇಳುವ ಮೂಲಕ ಮೊದಲ ಬಾರಿ ಈ ಬಗ್ಗೆ ಹೇಳಿಕೆ ನೀಡಿದ್ದರು. 

ಇದರ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರು ಅಧಿವೇಶನದಲ್ಲಿ ನಾನೇ ಸಿಎಂ ಎಂದು ಹೇಳುವ ಮೂಲಕ ಹೊಸ ಬಾಂಬ್ ಸಿಡಿಸಿದ್ದರು. ಈ ಬಳಿಕ ಇದೀಗ ಮತ್ತೇ ಸಿಎಂ ಕುರ್ಚಿ ಬಗ್ಗೆ ಕೈ ನಾಯಕರ ನಡುವೆ ಚರ್ಚೆ ಶುರುವಾಗಿದೆ. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೇಶದ ಮೊದಲ ಪ್ರಜೆಗೂ ಡೀಪ್‌ಫೇಕ್‌ ಕಾಟ: ಮಹಾಲಕ್ಷ್ಮಿ ಲೇಔಟ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲು

Karnataka Weather: ಈ ಏಳು ಜಿಲ್ಲೆಗಳಲ್ಲಿ ತೀವ್ರ ಶೀತ ಗಾಳಿ ಬೀಸುವ ಸಾಧ್ಯತೆ

ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕ ಅಂಶ ವದಂತಿ: ಬಂದೇಬಿಡ್ತು ಗ್ರಾಹಕರು ನಿಟ್ಟುಸಿರು ಬಿಡುವ ವರದಿ

ಬಂಧನ ಭೀತಿಯಿಂದ ತಲೆಮರೆಸಿಕೊಂಡ್ರಾ ಶಾಸಕ ಬೈರತಿ ಬಸವರಾಜ್

ನಿಮ್ಮ ಐದು ವರ್ಷದೊಳಗಿನ ಮಕ್ಕಳಿಗೆ ನಾಳೆ ಪಲ್ಸ್ ಪೋಲಿಯೋ ಹಾಕಿಸಿ

ಮುಂದಿನ ಸುದ್ದಿ
Show comments