ದಾವಣಗೆರೆ: ಯಾವುದೇ ಕಾರಣಕ್ಕೂ ಸಿಎಂ ಸಿದ್ದರಾಮಯ್ಯ ಅವರನ್ನು ಬದಲಾಯಿಸುವ ಸಾಧ್ಯತೆಯೇ ಇಲ್ಲ, ಹೀಗಾಗಿ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗುವುದಿಲ್ಲ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು.
ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಯತ್ನಾಳ್, ಯಾವುದೇ ನಾಯಕತ್ವ ಬದಲಾವಣೆ ಇರುವುದಿಲ್ಲ ಮತ್ತು 'ನವೆಂಬರ್ ಕ್ರಾಂತಿ' ಬಗ್ಗೆ ಊಹಾಪೋಹಗಳನ್ನು ತಳ್ಳಿಹಾಕಿದರು.
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭವಿಷ್ಯದ ಆಯ್ಕೆಗಳನ್ನು ಪರಿಗಣಿಸುತ್ತಿದ್ದಾರೆ ಎಂದು ಅವರು ಪ್ರತಿಪಾದಿಸಿದರು ಮತ್ತು ಸಿದ್ದರಾಮಯ್ಯ ಅವರನ್ನು ಮುಂದುವರಿಸದಿದ್ದರೆ ಖರ್ಗೆ ಅವರೇ ಆ ಸ್ಥಾನವನ್ನು ಪಡೆದುಕೊಳ್ಳಬಹುದು ಎಂದರು.
ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗುವುದಿಲ್ಲ. ಶಿವಕುಮಾರ್ ಬಿಜೆಪಿ ಸೇರಿ ಉನ್ನತ ಹುದ್ದೆಗೇರಿದರೆ, ಬಿ.ವೈ. ವಿಜಯೇಂದ್ರ ಉಪಮುಖ್ಯಮಂತ್ರಿಯಾದರು ಕರ್ನಾಟಕಕ್ಕೆ ಸಂಕಷ್ಟ ಎದುರಾಗಲಿದೆ.