Select Your Language

Notifications

webdunia
webdunia
webdunia
webdunia

ಸಿಎಂ ಬದಲಾವಣೆ ವಿಚಾರ, ಸುರ್ಜೆವಾಲಾ ಅವರಿಂದ ಎಲ್ಲದಕ್ಕೂ ಸ್ಪಷ್ಟನೆ: ಜಿ ಪರಮೇಶ್ವರ್

Karnataka CM Post Fight
ಬೆಂಗಳೂರು: ರಾಜ್ಯ ಸಿಎಂ ಬದಲಾವಣೆ ವಿಚಾರ ಹೈಕಮಾಂಡ್‌ ತೀರ್ಮಾನಕ್ಕೆ ಬಿಟ್ಟ ವಿಚಾರ ಎಂದು ಗೃಹಸಚಿವ ಜಿ ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ.

ರಾಜ್ಯದಲ್ಲಿ ನಡೆಯುತ್ತಿರುವ ಬೆಳವಣಿಗೆ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು,  ಹೈಕಮಾಂಡ್ ಮಟ್ಟದಲ್ಲಿ ಏನು ಮಾತುಕತೆಯಾಯಿತು ಎಂಬುವುದು ನನಗೆ ಗೊತ್ತಿಲ್ಲ. ಇನ್ನೂ ಮಾಧ್ಯಮಗಳಲ್ಲಿ ಹಲವು ವದಂತಿಗಳು ಹರಿದಾಡುತ್ತಿದೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್‌ ಸುರ್ಜೆವಾಲಾ ಅವರು ಇಂದು ಬೆಂಗಳೂರಿಗೆ ಆಗಮಿಸುತ್ತಿದ್ದು , ಅವರೇ ಎಲ್ಲದಕ್ಕೂ ಸ್ಪಷ್ಟನೆ ನೀಡುತ್ತಾರೆ ಎಂದು ಹೇಳಿದರು. 

ರಾಜ್ಯಸಭೆ ಮತ್ತು ಕೌನ್ಸಿಲ್‌ಗೆ ನೇಮಕಾತಿ ಬಗ್ಗೆ ಚರ್ಚೆ ಮಾಡಿರುವುದಾಗಿ ಮಾಧ್ಯಮಗಳಲ್ಲಿ   ಪ್ರಸಾರವಾಗಿದೆ. ಅದಷ್ಟೇ ನನಗೆ ಗೊತ್ತು. ಸಿದ್ದರಾಮಯ್ಯ ಅವರು ನನ್ನ ಜೊತೆ ಏನನ್ನೂ ಚರ್ಚೆ ಮಾಡಿಲ್ಲ ಎಂದು ಹೇಳಿದ್ದಾರೆ.

ಇನ್ನೂ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ರೆ ನೀವು ಸಿಎಂ ಹುದ್ದೆಗೆ ಬೇಡಿಕೆ ನೀಡುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಅವೆಲ್ಲ ಅಪ್ರಸ್ತುತ. ಅದು ಹೈಕಮಾಂಡ್ ತೀರ್ಮಾನಕ್ಕೆ ಬಿಟ್ಟ ವಿಚಾರ. ನಾನು ಯಾರನ್ನೂ ಭೇಟಿ ಮಾಡಿಲ್ಲ. ಅಲ್ಲಿ ಏನು ಚರ್ಚೆಯಾಯಿತು ಎಂಬ ಬಗ್ಗೆ ನನಗೆ ತಿಳಿದಿಲ್ದ ಎಂದಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಈದ್ ಹಬ್ಬಕ್ಕೂ ಮುನ್ನಾ ಹಮಾಸ್ ನಾಯಕನನ್ನೇ ಮುಗಿಸಿದ ಇಸ್ರೇಲ್‌