ಮೈಸೂರು: ಮುಖ್ಯಮಂತ್ರಿ ಕುರ್ಚಿಯಲ್ಲಿ ಪ್ರಯತ್ನದಲ್ಲಿರುವ ಮಲ್ಲಿಕಾರ್ಜುನ್ ಖರ್ಗೆ ಅವರೇ ಸಿಎಂ ಆಗುತ್ತಾರೆ. ಇಬ್ಬರಲ್ಲಿ ಮೂರನೆಯವರಿಗೆ ಲಾಭ ಎಂಬಂತೆ ಮಲ್ಲಿಕಾರ್ಜುನ ಖರ್ಗೆ ಸಿಎಂ ಸ್ಥಾನ ಸಿಗುತ್ತೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ 1999ರಲ್ಲಿ ಸಿಎಂ ಸ್ಥಾನ ಕೈತಪ್ಪಿದ್ದಕ್ಕೆ ಖರ್ಗೆ ಬೇಸರ ವ್ಯಕ್ತಪಡಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿ, ಖರ್ಗೆ ಸರಿಯಾದ ಸಮಯಕ್ಕೆ ಕಲ್ಲು ಹೊಡೆದಿದ್ದಾರೆ. ಕರ್ನಾಟಕ ಸಿಎಂ ಸ್ಥಾನದಲ್ಲಿ ಕುಳಿತುಕೊಳ್ಳಲು ಪ್ರಯತ್ನದಲ್ಲಿದ್ದಾರೆ ಎಂದರು.
ಎಸ್‌ಎಂ ಕೃಷ್ಣ ಅವರು ನಿಧನದ ನಂತರ ಅವರ ಹೆಸರು ಹೇಳುತ್ತಾರೆ. ಎಸ್.ಎಂ. ಕೃಷ್ಣ ಸತ್ತ ಮೇಲೆ ಖರ್ಗೆ ಟೀಕೆ ಮಾಡುತ್ತಿದ್ದಾರೆ. ಈ ಮೂಲಕ ಕೃಷ್ಣಗೆ ಅಪಮಾನ ಮಾಡುತ್ತಿದ್ದಾರೆ ಎಂದರು.
ಸಿದ್ದರಾಮಯ್ಯ ಇಲ್ಲದಿದ್ದರೆ ಮಲ್ಲಿಕಾರ್ಜುನ್ ಖರ್ಗೆ ಸಿಎಂ ಆಗುತ್ತಿದ್ದರೆ. ಅಕ್ಟೋಬರ್ ತಿಂಗಳಿನಲ್ಲಿ ಸಿಎಂ ಬದಲಾವಣೆ ಆಗುವುದು ನಿಜ. ಸಿಎಂ ಸ್ಥಾನಕ್ಕಾಗಿ ವರ ಕೊಡುವ ದೇವರ ಬಳಿ ಡಿಕೆಶಿ ಹೋಗುತ್ತಿದ್ದಾರೆ. ಡಿಕೆಗೆ ಕಂಟಕ ಇರೋದು ಜೆಡಿಎಸ್‌ನಿಂದ ಕಾಂಗ್ರೆಸ್‌ಗೆ ಹೋದವರಿಂದ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.