Publish Date: Mon, 10 Oct 2022 (13:21 IST)
Updated Date: Mon, 10 Oct 2022 (13:16 IST)
ಬೆಂಗಳೂರು : ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ, ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ರಾಮ್ ಮನೋಹರ್ ಲೋಹಿಯಾ, ರಾಜ್ ನಾರಾಯಣ್ ಅವರಂಥ ನಾಯಕರ ಮಾರ್ಗದರ್ಶನದಲ್ಲಿ ಮುನ್ನೆಲೆಗೆ ಬಂದ ಮುಲಾಯಂ ಸಿಂಗ್ ಅವರು ತುರ್ತು ಪರಿಸ್ಥಿತಿ ವಿರೋಧಿಸಿ ಸೆರೆವಾಸ ಅನುಭವಿಸಿದ್ದರು.
ಆತ್ಮಕ್ಕೆ ಶಾಂತಿ ದೊರೆಯಲಿ. ಭಗವಂತ ಅವರ ಕುಟುಂಬದವರಿಗೆ ಹಾಗೂ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.