Webdunia - Bharat's app for daily news and videos

Install App

ದಾವಣಗೆರೆ ಉತ್ತರದಿಂದ ಸಿಎಂ ಸ್ಪರ್ಧೆ?

Webdunia
ಸೋಮವಾರ, 20 ಮಾರ್ಚ್ 2023 (17:18 IST)
ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ಶಿಗ್ಗಾವಿ ಕ್ಷೇತ್ರದಲ್ಲಿ ಸ್ಪರ್ಧಿಸುವಂತೆ ಮಾಜಿ ಸಚಿವ ವಿನಯ್​ ಕುಲಕರ್ಣಿಗೆ ಕಾಂಗ್ರೆಸ್ ಹೈಕಮಾಂಡ್ ಅನುಮತಿ ನೀಡಿದೆ. ಪಂಚಮಸಾಲಿ ಮತಗಳು ಅಧಿಕವಾಗಿದ್ದರಿಂದ ವಿನಯ್​ ಕುಲಕರ್ಣಿ ಮೂಲಕ ಸಿಎಂ ಬೊಮ್ಮಾಯಿ ಹಣಿಯಲು ಕಾಂಗ್ರೆಸ್ ಮುಂದಾಗಿದೆ. ಇನ್ನು ಈ ಬಗ್ಗೆ ಸ್ವತಃ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿನಯ್ ಕುಲಕರ್ಣಿ, ಶಿಗ್ಗಾವಿ ಕ್ಷೇತ್ರದಿಂದ ಸ್ಪರ್ಧೆ ಮಾಡುವುದು ನನ್ನ ನಿರ್ಧಾರವಲ್ಲ. ಸಿಎಂ ವಿರುದ್ಧ ಸ್ಪರ್ಧೆ ಮಾಡಬೇಕೆಂಬುದು ಹೈಕಮಾಂಡ್ ನಿರ್ಧಾರ ಎಂದು ಸ್ಪಷ್ಟಪಡಿಸಿದರು. ಧಾರವಾಡಕ್ಕೆ ಹೋಗುವುದಕ್ಕೆ ನನಗೆ ಕೋರ್ಟ್ ನಿರ್ಬಂಧ ಇದೆ. ನಾನು ಶಿಗ್ಗಾವಿಯಲ್ಲಿ ಸ್ಪರ್ಧಿಸುವ ಬಗ್ಗೆ ಪಕ್ಷ ತೀರ್ಮಾನಿಸಲಿದೆ. ಶಿಗ್ಗಾವಿ ಒಂದೇ ಅಲ್ಲ, ನನಗೆ ಇನ್ನೂ ನಾಲ್ಕೈದು ಕ್ಷೇತ್ರಗಳಿವೆ. ದೇಶದಲ್ಲಿ ಪ್ರಜಾಪ್ರಭುತ್ವ ಕಗ್ಗೊಲೆಯಾಗಿರುವುದಕ್ಕೆ ನಾನು ಸಾಕ್ಷಿ. ನನ್ನ ವಿರುದ್ಧ ಷಡ್ಯಂತ್ರ ಮಾಡಲಾಗುತ್ತಿದೆ ಎಂದು ಹೇಳಿದ್ರು. ಈ ಹಿನ್ನೆಲೆಯಲ್ಲಿ ಹಾಲಿ ಕ್ಷೇತ್ರ ಬಿಟ್ಟು ಸಿಎಂ ಬೊಮ್ಮಾಯಿ ಮತ್ತೊಂದು ಕ್ಷೇತ್ರದಲ್ಲಿ ಸ್ಪರ್ದಿಸುತ್ತಾರಾ ಎಂಬ ಪ್ರಶ್ನೆ ಎದ್ದಿದೆ. ದಾವಣಗೆರೆ ಉತ್ತರ ಕ್ಷೇತ್ರದಿಂದ ಸ್ಪರ್ಧಿಸೋಕೆ ಸಿಎಂ ಬೊಮ್ಮಾಯಿ ಚಿಂತನೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಕ್ಷಿಣ ಕನ್ನಡದಲ್ಲಿ 20 ನಕಲಿ ವೈದ್ಯರ ವಿರುದ್ಧ ಕೇಸ್‌, ಕ್ಲಿನಿಕ್‌ಗೆ ಬೀಗ

ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಬಿಗ್ ಶಾಕ್

ಎಂಥ ಪರಿಸ್ಥಿತಿಯಲ್ಲಿ ಕೂಡ ನಮ್ಮ ತಾಳ್ಮೆಯನ್ನು ಪರೀಕ್ಷೆ ಮಾಡೋಕೆ ಹೋಗಬೇಡಿ, Video

40ವರ್ಷದಿಂದ ಕಾಂಗ್ರೆಸ್‌ಗೆ ಮತ ಹಾಕಿದವರಿಗೆ ಶಿವಕುಮಾರ್‌ ಯಾರೆಂಬುದೇ ಗೊತ್ತಿಲ್ಲ: ಬಿಜೆಪಿ ಲೇವಡಿ

ಅಂಗಡಿ ಮುಂದೆ ಚಾಕಲೇಲ್‌ಗೆಂದು ನಿಂತಿದ್ದ ಇಬ್ಬರು ಮಕ್ಕಳು: ಟ್ರ್ಯಾಕ್ಟರ್ ಚಾಲಕನ ನಿರ್ಲ್ಯಕ್ಷಕ್ಕೆ ಪ್ರಾಣವೇ ಹೋಯ್ತು

ಮುಂದಿನ ಸುದ್ದಿ
Show comments