Webdunia - Bharat's app for daily news and videos

Install App

ಚಾಮುಂಡಿಗೆ ರೇಷ್ಮೆ ಸೀರೆ ಕೊಟ್ಟು ಹರಕೆ ತೀರಿಸಿದ ಸಿಎಂ, ಡಿಸಿಎಂ!

Webdunia
ಮಂಗಳವಾರ, 29 ಆಗಸ್ಟ್ 2023 (13:24 IST)
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇಂದು ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿದ್ದಾರೆ.
 
ಈ ವೇಳೆ ನಾಡದೇವತೆಗೆ ಸಿಎಂ ಹಾಗೂ ಡಿಸಿಎಂ ತಲಾ 2 ಸಾವಿರ ಕಾಣಿಗೆ ನೀಡಿದರು. ಅಲ್ಲದೆ ತಾಯಿ ಚಾಮುಂಡಿಗೆ ಹಸಿರು ಮತ್ತು ಕೆಂಪು ರೇಷ್ಮೆ ಸೀರೆ ಅರ್ಪಣೆ ಮಾಡಿ, ಗ್ಯಾರಂಟಿ ಕಾರ್ಡ್ ಇಟ್ಟು ಪೂಜೆ ಸಲ್ಲಿಸಿ ಪ್ರಾರ್ಥನೆ ಮಾಡಿದರು. ಬಳಿಕ ಈಡುಗಾಯಿ ಹೊಡೆದು ಇಬ್ಬರೂ ಹರಕೆ ತೀರಿಸಿದರು.

ಬಳಿಕ ಸರ್ಕಾರ 100 ದಿನ ಪೂರೈಸಿದ ವಿಚಾರದ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ನಮಗೆ ಇದೇನು ಸವಾಲು ಎನ್ನಿಸಲಿಲ್ಲ. ಗ್ಯಾರೆಂಟಿ ವಿಚಾರದಲ್ಲಿ ನಮಗೆ ಬದ್ಧತೆ ಇತ್ತು. ಹೀಗಾಗಿ ಅವುಗಳ ಜಾರಿ ಕಠಿಣ ಅನಿಸಲಿಲ್ಲ.

ಮಾತು ಕೊಟ್ಟಂತೆ ಗ್ಯಾರೆಂಟಿಗಳ ಜಾರಿ ಮಾಡುತ್ತಿದ್ದೇವೆ. ಖುದ್ದು ಪಿಎಂ ಕೂಡ ಗ್ಯಾರೆಂಟಿಗಳ ಬಗ್ಗೆ ಆರೋಪ ಮಾಡುತ್ತಿದ್ದರು. ಆದರೆ ಸರ್ಕಾರ ರಾಜ್ಯ ಯಾವ ದಿವಾಳಿಯೂ ಆಗಿಲ್ಲ. ಎಲ್ಲವನ್ನೂ ವ್ಯವಸ್ಥಿತವಾಗಿ ಜಾರಿ ಮಾಡುತ್ತಿದ್ದೇವೆ. ಗೃಹ ಲಕ್ಷ್ಮಿಗೆ ವಾರ್ಷಿಕ 32 ಸಾವಿರ ಕೋಟಿ ಖರ್ಚಾಗುತ್ತೆ. ದೇಶದ ಇತಿಹಾಸದಲ್ಲೇ ಒಂದು ಯೋಜನೆ ಇಷ್ಟು ದೊಡ್ಡ ಪ್ರಮಾಣದ ಹಣ ಖರ್ಚು ಮಾಡುತ್ತಿರುವುದು ಇದೇ ಮೊದಲು ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments