Select Your Language

Notifications

webdunia
webdunia
webdunia
webdunia

CM ದೆಹಲಿ ಪ್ರವಾಸ: ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ

CM ದೆಹಲಿ ಪ್ರವಾಸ: ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ
bangalore , ಗುರುವಾರ, 21 ಜುಲೈ 2022 (16:29 IST)
ನೂತನ ರಾಷ್ಟ್ರಪತಿಗಳ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳಲು ಜು. 24 ರಂದು ನವದೆಹಲಿಗೆ ತೆರಳಿತ್ತಿದ್ದೇನೆ. ಈ ಸಂದರ್ಭದಲ್ಲಿ ಪಕ್ಷದ ಮುಖಂಡರು ಪ್ರಸ್ತಾಪಿಸಿದರೆ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸಮಲೋಚನೆ ನಡೆಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿವಿಧ ಇಲಾಖೆಗಳ ನಿಯೋಗದೊಂದಿಗೆ ಜುಲೈ 24 ರಂದು ದೆಹಲಿ ಪ್ರವಾಸ ಕೈಗೊಳ್ಳುತ್ತಿದ್ದೇನೆ. ರಾಷ್ಟ್ರದ ನೂತನ ರಾಷ್ಟ್ರಪತಿಗಳ ಪ್ರಮಾಣವಚನ ಕಾರ್ಯಕ್ರಮ, ವಿವಿಧ ಇಲಾಖೆಗಳು ಮತ್ತು ಕಸ್ತೂರಿ ರಂಗನ್ ಯೋಜನೆ ವಿಚಾರವಾಗಿ ನಿಯೋಗವನ್ನು ಬೆಂಗಳೂರಿನಿಂದ ದೆಹಲಿಗೆ ಕರೆದೊಯ್ಯಿರುವುದಾಗಿ ಹೇಳಿದರು.ಜುಲೈ 25 ಮತ್ತು 26 ರಂದು ದೆಹಲಿಯಲ್ಲಿರುತ್ತೇನೆ. ಆ ಸಂದರ್ಭದಲ್ಲಿ ಸಂಪುಟ ವಿಸ್ತರಣೆ ಬಗ್ಗೆ ವರಿಷ್ಠರು ಪ್ರಸ್ತಾಪ ಮಾಡಿದರೆ, ನಾನು ಮಾತುಕತೆ ನಡೆಸುತ್ತೇನೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಬೈಕ್​​​​​-ಲಾರಿ ಡಿಕ್ಕಿ, ಬೈಕ್​ ಸವಾರ ಸಾವು