ತವರು ಜಿಲ್ಲೆಗೆ ಇಂದು ಸಿಎಂ ಕುಮಾರಸ್ವಾಮಿ ಭೇಟಿ ನೀಡಲಿದ್ದು, ರೈತರಿಗೆ ಋಣಮುಕ್ತ ಪ್ರಮಾಣ ಪತ್ರ ವಿತರಣೆ ಮಾಡಲಿದ್ದಾರೆ.
ಕೃಷಿ ಸಾಲಮನ್ನಾ ಘೋಷಣೆ ಮಾಡಿರುವ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಹಾಸನದಲ್ಲಿ ಇಂದು ರೈತರಿಗೆ ಋಣಮುಕ್ತ ಪ್ರಮಾಣ ಪತ್ರ ವಿತರಣೆ ಮಾಡಲಿದ್ದಾರೆ.
ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಆಗಮಿಸಲಿರುವ ಸಿಎಂ, ಹಾಸನದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಡಿಸಿಎಂ ಪರಮೇಶ್ವರ್ ಮೊದಲಾದ ಗಣ್ಯರು ಭಾಗಿಯಾಗಲಿದ್ದಾರೆ.
ಜಿಲ್ಲೆಯಲ್ಲಿ ಒಟ್ಟಾರೆ ಸಾಲ ಪಡೆದಿರುವ 2.20 ಲಕ್ಷ ರೈತರು ಯೋಜನೆಯ ಲಾಭ ಪಡೆದುಕೊಳ್ಳಲಿದ್ದಾರೆ. ರಾಷ್ಟ್ರೀಕೃತ ಹಾಗೂ ಸಹಕಾರಿ ಬ್ಯಾಂಕುಗಳಿಂದ ಒಟ್ಟು 1600 ಕೋಟಿ ರೂ. ಸಾಲ ವಿತರಣೆ ಮಾಡಲಾಗಿದೆ. ಈ ಪೈಕಿ ಇಂದು ಸಾಂಕೇತಿಕವಾಗಿ ಸಾಲ ಋಣಮುಕ್ತ ಪತ್ರ ವಿತರಣೆ ಮಾಡಲಾಗುತ್ತಿದೆ.
ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!