Select Your Language

Notifications

webdunia
webdunia
webdunia
webdunia

ಸಿಎಂ ಆದ ಬೆನ್ನಲ್ಲೇ ವಿದ್ಯಾರ್ಥಿಗಳಿಗೆ ಬಂಪರ್ ಯೋಜನೆ ಘೋಷಿಸಿದ ಡಿಕೆ ಶಿವಕುಮಾರ್

DK Shivakumar
ಬೆಂಗಳೂರು: ರಾಜ್ಯ ಸಿಎಂ ಆದ ಬೆನ್ನಲ್ಲೇ ವಿದ್ಯಾರ್ಥಿಗಳಿಗೆ ಬಂಪರ್ ಯೋಜನೆಯೊಂದನ್ನು ಡಿಕೆ ಶಿವಕುಮಾರ್ ಘೋಷಿಸಿದ್ದಾರೆ.

ಇಂದು ಸಂಜೆ ಡಿಕೆ ಶಿವಕುಮಾರ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದಾದ ಬಳಿಕ ಅವರು ವಿಧಾನಸೌದಕ್ಕೆ ತೆರಳಿ ತಮ್ಮ ಕೊಠಡಿಗೆ ಪೂಜೆ ಸಲ್ಲಿಸಿದ್ದಾರೆ. ವಿಧಾನಸೌಧದ ಮೆಟ್ಟಿಲು ಏರುವ ಮೊದಲು ಮೆಟ್ಟಿಲುಗಳಿಗೆ ನಮಸ್ಕರಿಸಿಯೇ ಅವರು ತಮ್ಮ ಕೆಲಸ ಆರಂಭಿಸಿದ್ದಾರೆ.

ಇನ್ನು ಸಿಎಂ ಆದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಡಿಕೆ ಶಿವಕುಮಾರ್ ಉಚಿತ ಬಸ್ ಪಾಸ್ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಹೀಗಾಗಿ ಇನ್ನು ಮುಂದೆ ವಿದ್ಯಾರ್ಥಿನಿಯರಂತೆ ವಿದ್ಯಾರ್ಥಿಗಳೂ ಉಚಿತ ಬಸ್ ಪ್ರಯಾಣ ಮಾಡಬಹುದಾಗಿದೆ. ಈ ಹಿಂದೆ ಡಿಸಿಎಂ ಆಗಿದ್ದಾಗ ಅವರಿಗೆ ಸಂವಾದವೊಂದರಲ್ಲಿ ವಿದ್ಯಾರ್ಥಿಗಳು ನಮಗೂ ಮಹಿಳೆಯರಂತೆ ಉಚಿತ ಬಸ್ ಟಿಕೆಟ್ ಕೊಡಿ ಎಂದು ಆಗ್ರಹಿಸಿದ್ದರು. ಅದನ್ನು ಈಗ ಅವರು ನೆರವೇರಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದ ಹಾಗೇ ಮುನಿಸು ಮರೆತು ವಿಶೇಷವಾಗಿ ವಿಶ್ ಮಾಡಿದ ಎಚ್ ಡಿ ಕುಮಾರಸ್ವಾಮಿ