Select Your Language

Notifications

webdunia
webdunia
webdunia
webdunia

ಕ್ಯಾಬಿನೆಟ್ ವಿಸ್ತರಣೆಯಾಗುತ್ತದೆ, ಸಚಿವ ಸ್ಥಾನ ಸಿಗುತ್ತದೆ ಎಂದುಕೊಂಡಿದ್ದ ಕಾಂಗ್ರೆಸ್ ಶಾಸಕರಿಗೆ ನಿರಾಸೆ

DK Shivakumar
ಬೆಂಗಳೂರು: ಕ್ಯಾಬಿನೆಟ್ ವಿಸ್ತರಣೆಯಾಗುತ್ತದೆ, ಇಂದೇ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಬಹುದು ಎಂದು ಕಾದಿದ್ದ ಕರ್ನಾಟಕ ಕಾಂಗ್ರೆಸ್ ಶಾಸಕರಿಗೆ ನಿರಾಸೆಯಾಗಿದೆ.

ಕರ್ನಾಟಕದಲ್ಲಿ ಡಿಕೆ ಶಿವಕುಮಾರ್ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿ ಎರಡು ತಿಂಗಳಾಗಿವೆ. ಇದುವರೆಗೆ ಸಂಪುಟ ವಿಸ್ತರಣೆಯಾಗಿಲ್ಲ. ರಾಹುಲ್ ಗಾಂಧಿ ವಿದೇಶದಿಂದ ಬಂದ ಮೇಲೆ ವಿಸ್ತರಣೆಯಾಗಲಿದೆ ಎಂದು ನಿರೀಕ್ಷಿಸಲಾಗಿತ್ತು.

ಆದರೆ ವಿದೇಶದಿಂದ ಬಂದ ರಾಹುಲ್ ಗಾಂಧಿ ಈಗ ನೀಟ್ ಪ್ರತಿಭಟನೆಯಲ್ಲಿ ಬ್ಯುಸಿಯಾಗಿದ್ದಾರೆ. ನಿನ್ನೆ ಪ್ರಧಾನಿ ಮೋದಿ ನಿವಾಸದ ಮುಂದೆ ಪ್ರತಿಭಟನೆಗೆ ಕೂತಿದ್ದ ರಾಹುಲ್ ರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ನಂತರ ಬಿಡುಗಡೆ ಮಾಡಿದ್ದರು.

ಹೀಗಾಗಿ ನಿನ್ನೆ ಕ್ಯಾಬಿನೆಟ್ ವಿಸ್ತರಣೆ ವಿಚಾರವಾಗಿ ಮಾತುಕತೆ ನಡೆಸಲು ದೆಹಲಿಗೆ ತೆರಳಿದ್ದ ಸಿಎಂ ಡಿಕೆ ಶಿವಕುಮಾರ್ ಬರಿಗೈಯಲ್ಲಿ ವಾಪಸಾಗಿದ್ದಾರೆ. ಎಲ್ಲವೂ ಹೈಕಮಾಂಡ್ ತೀರ್ಮಾನದಂತೆ ನಡೆಯಲಿದೆ ಎಂದು ಡಿಕೆ ಶಿವಕುಮಾರ್ ಈಗಾಗಲೇ ಹೇಳಿದ್ದಾರೆ.

ಆದರೆ ದಿಲ್ಲಿ ನಾಯಕರು ಸದ್ಯಕ್ಕೆ ಪ್ರತಿಭಟನೆ, ಪಾರ್ಲಿಮೆಂಟ್ ಅಧಿವೇಶನದಲ್ಲಿ ಬ್ಯುಸಿಯಾಗಿದ್ದಾರೆ. ಹೀಗಾಗಿ ಸಚಿವ ಸಂಪುಟ ವಿಸ್ತರಣೆ ವಿಚಾರ ಮತ್ತೆ ಮುಂದೂಡಿಕೆಯಾಗಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ನಹೀ ಜಾನಾ ಹೈ.. ಎಂದು ಸಮಯ ಮುಗಿದರೂ ಬ್ಯಾಂಕ್ ಗೇಟ್ ಲಾಕ್ ಮಾಡಿ ಕೆಲಸ ಮಾಡಿಸಿದ ಮ್ಯಾನೇಜರ್ Video