Publish Date: Sat, 11 Jul 2026 (23:27 IST)
Updated Date: Sat, 11 Jul 2026 (23:29 IST)
ಬೆಂಗಳೂರು: ಸಕಲ ಸರ್ಕಾರಿ ಗೌರವಗಳೊಂದಿಗೆ ನಾಳೆಸ್ವರ ಸಾಮ್ರಾಜ್ಞಿ ಎಸ್ ಜಾನಕಿಯವರ ಅಂತ್ಯಕ್ರಿಯೆಯನ್ನು ನಡೆಸಲಾಗುವುದು ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಇನ್ನೂ ಎಸ್ ಜಾನಕಿ ನಿಧನದ ಬಳಿಕ ಅವರ ಕುಟುಂಬದವರನ್ನು ಸಂಪರ್ಕಿಸಿ ಸಾಂತ್ವನವನ್ನು ಹೇಳಿದ್ದಾರೆ.
ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಫೋಸ್ಟ್‌ವೊಂದನ್ನು ಹಂಚಿಕೊಂಡಿದ್ದಾರೆ. ಸರ್ಕಾರಿ ಗೌರವಗಳೊಂದಿಗೆ 'ಗಾನ ಕೋಗಿಲೆ' ಅಂತ್ಯಸಂಸ್ಕಾರ
ಮೈಸೂರಿನಲ್ಲಿ ನಿಧನರಾಗಿರುವ ಗಾನ ಕೋಗಿಲೆ ಎಸ್. ಜಾನಕಿ ಅವರ ಕುಟುಂಬ ಸದಸ್ಯರಿಗೆ
ಮುಖ್ಯಮಂತ್ರಿಗಳಾದ ಶ್ರೀ @DKShivakumar ಅವರು ದೂರವಾಣಿ ಕರೆ ಮಾಡಿ ಸಾಂತ್ವನ ಹೇಳಿದರು.
ಸ್ವರ ಸಾಮ್ರಾಜ್ಞಿ ಎಸ್. ಜಾನಕಿ ಅವರ ಅಂತ್ಯಸಂಸ್ಕಾರವನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲು ಮುಖ್ಯಮಂತ್ರಿಗಳು ಸೂಚನೆ ನೀಡಿದರು.
ಸರ್ಕಾರದ ಪರವಾಗಿ ಅಂತ್ಯಸಂಸ್ಕಾರದಲ್ಲಿ ಭಾಗವಹಿಸಲು ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರನ್ನು ನಿಯೋಜಿಸಲಾಗಿದೆ.
ತಮ್ಮ ಅದ್ಭುತ ಕಂಠಸಿರಿಯಿಂದ ಕೋಟ್ಯಂತರ ಹೃದಯಗಳನ್ನು ಗೆದ್ದ ಮಹಾನ್ ಗಾಯಕಿಗೆ ಗೌರವಪೂರ್ವಕ ವಿದಾಯ ಹೇಳಲು ಸರ್ಕಾರ ತೀರ್ಮಾನಿಸಿದೆ.
ಇನ್ನೂ ಎಸ್ ಜಾನಕಿ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿ ಪೋಸ್ಟ್ ಹಂಚಿಕೊಂಡ ಡಿಕೆ ಶಿವಕುಮಾರ್ ಅವರು ಹಾಡು ನಿಲ್ಲಿಸಿದ ʻಕೋಗಿಲೆʼ
ಪ್ರಖ್ಯಾತ ಗಾಯಕಿ, 'ಗಾನ ಕೋಗಿಲೆ' ಎಸ್. ಜಾನಕಿ ಅಮ್ಮ ಅವರ ನಿಧನವಾರ್ತೆ ತಿಳಿದು, ದುಃಖಿತನಾಗಿದ್ದೇನೆ. 17 ಭಾಷೆಗಳಲ್ಲಿ ತಮ್ಮ ಇಂಪಾದ ಕಂಠದ ಮೂಲಕ ಸಾವಿರಾರು ಹಾಡುಗಳನ್ನು ಹಾಡಿದ ಅವರ ಅಗಲಿಕೆ ಸಂಗೀತ ಲೋಕಕ್ಕೆ ತುಂಬಲಾರದ ನಷ್ಟ. ಗಾಯನವನ್ನೇ ಉಸಿರಾಗಿಸಿಕೊಂಡಿದ್ದ ಜಾನಕಮ್ಮನವರು, ಅವರ ಹಾಡುಗಳ ಮೂಲಕ ಸದಾ ಸಂಗೀತಪ್ರಿಯರ ಮನಸ್ಸಿನಲ್ಲಿ ಹಸಿರಾಗಿರುತ್ತಾರೆ.
ಅವರ ಅಸಂಖ್ಯಾತ ಅಭಿಮಾನಿಗಳು, ಆಪ್ತರು, ಕುಟುಂಬ ವರ್ಗಕ್ಕೆ ಈ ನೋವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ. ಮೃತರ ಆತ್ಮಕ್ಕೆ ಸದ್ಗತಿ ಸಿಗಲಿ.
About Writer
ಸಂಪ್ರಿಯ
ಕನ್ನಡ ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷದಲ್ಲಿ ಬೇರೆ ಬೇರೆ ಸಂಸ್ಥೆಗಳಲ್ಲಿ ರಿಪೋರ್ಟರ್ ಆಗಿ, ಸಬ್ ಎಡಿಟರ್ ಆಗಿ, ಇದೀಗ ಕಂಟೆಂಟ್ ರೈಟರ್ ಆಗಿ ವೆಬ್ದುನಿಯಾದಲ್ಲಿ ಕೆಲಸ. ಆಳ್ವಾಸ್ ಕಾಲೇಜಿನಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋಧ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು 2016ನೇ ಸಾಲಿನಲ್ಲಿ ಪಡೆದಿರುತ್ತೇನೆ. ಮನರಂಜನೆ, ಲೈಫ್ಸ್ಟೈಲ್, ರಾಜಕೀಯ ಸುದ್ದಿಗಳ ಬಗ್ಗೆ ವಿಶೇಷ ಆಸಕ್ತಿ. ....
ಮತ್ತಷ್ಟು ಓದಿ