Publish Date: Thu, 04 Jun 2026 (16:37 IST)
Updated Date: Thu, 04 Jun 2026 (16:40 IST)
ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ತಾವೇ ಬೇರೆ ತಮ್ಮ ಸ್ಟೈಲೇ ಬೇರೆ ಎಂದು ಮೊದಲ ದಿನದಿಂದಲೇ ಸೂಚನೆ ನೀಡುತ್ತಿದ್ದಾರೆ. ಇಂದು ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿರುವ ಅವರು ಜಾತಿ ಧರ್ಮ ಯಾವುದಕ್ಕೂ ಮಣಿಯದೇ ಪಾರದರ್ಶಕವಾಗಿ ಕೆಲಸ ಮಾಡಿ ಎಂದು ಆದೇಶ ನೀಡಿದ್ದಾರೆ.
ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಮ್ಯಾರಥಾನ್ ಸಭೆಗಳನ್ನು ಮಾಡುತ್ತಿರುವ ಸಿಎಂ ಡಿಕೆ ಶಿವಕುಮಾರ್ ಇಂದು ಸರ್ಕಾರದ ಎಲ್ಲಾ ಅಪರ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ, ಕಾರ್ಯದರ್ಶಿ, ಎಲ್ಲಾ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು, ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು ಮತ್ತು ಮೇಲ್ಪಟ್ಟ ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಮುಖ್ಯ ಪ್ರಧಾನ ಸಂರಕ್ಷಣಾಧಿಕಾರಿಗಳು ಮತ್ತು ಮೇಲ್ಪಟ್ಟ ಅರಣ್ಯ ಅಧಿಕಾರಿಗಳೊಂದಿಗೆ ಇಂದು ವಿಧಾನಸೌಧದಲ್ಲಿ ಸಭೆ ನಡೆಸಿದರು.
ಈ ವೇಳೆ ಪೊಲೀಸರಿಗೆ ಖಡಕ್ ಸಂದೇಶ ನೀಡಿದ್ದಾರೆ. ಸರ್ಕಾರದ ಸುಗಮ ಆಡಳಿತಕ್ಕೆ ಅಧಿಕಾರಿಗಳೇ ಬೆನ್ನೆಲುಬು. ಸಾರ್ವಜನಿಕರ ಕಷ್ಟಗಳಿಗೆ ತಕ್ಷಣ ಸ್ಪಂದಿಸಿ, ಸರ್ಕಾರದ ಜನಕಲ್ಯಾಣ ಯೋಜನೆಗಳನ್ನು ಸಮರ್ಥವಾಗಿ ಜನರಿಗೆ ತಲುಪಿಸಿ. ಅಭಿವೃದ್ಧಿಯ ಹಾದಿಗೆ ಮೆಟ್ಟಿಲಾಗಿ. ಜನ ಮೆಚ್ಚುವ ಹಾಗೇ ಕೆಲಸ ಮಾಡಿ. ಸರ್ಕಾರಕ್ಕೂ ಒಳ್ಳೆಯ ಹೆಸರು ತನ್ನಿ ಎಂದು ಸೂಚನೆ ನೀಡಿದ್ದಾರೆ.
ಇದೇ ವೇಳೆ ರೌಡಿಗಳ ಮಟ್ಟ ಹಾಕಲು ರೌಡಿ ನಿಗ್ರಹ ದಳಿ ಸ್ಥಾಪಿಸುವಂತೆಯೂ ಆದೇಶ ನೀಡಿದ್ದಾರೆ. ನಿನ್ನೆ ಸಿಎಂ ಆದ ಬೆನ್ನಲ್ಲೇ ಡಿಕೆ ಶಿವಕುಮಾರ್ ಆರು ಗ್ಯಾರಂಟಿಗಳನ್ನು ಘೋಷಿಸಿದ್ದರು. ಅದನ್ನು ತಕ್ಷಣದಿಂದಲೇ ಜಾರಿ ಮಾಡುವಂತೆ ಸೂಚಿಸಿದ್ದಾರೆ.
About Writer
ಕೃಷ್ಣವೇಣಿ ಕೆ
Completed bachelor degree in Journalism and communication in SDMC Ujire. 15 years of experience as journalist. Worked as sub editor and reporter. Specialties in sports, politics and entertainment.....
ಮತ್ತಷ್ಟು ಓದಿ