Daily Horoscope

Select Your Language

Notifications

webdunia
webdunia
webdunia
webdunia

ಬೆಂಗಳೂರು ಕ್ವಾರಿ ದುರಂತದ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಏನು ಹೇಳಿದ್ರು

DK Shivakumar
ಬೆಂಗಳೂರು: ಇಲ್ಲಿನ ದಕ್ಷಿಣ ತಾಲೂಕಿನ ಮಾದಪಟ್ಟಣದಲ್ಲಿ ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿತದಿಂದ 7 ಮಂದಿ ಸಾವನ್ನಪ್ಪಿದ ಘಟನೆ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.

ಬೆಂಗಳೂರು ದಕ್ಷಿಣ ತಾಲೂಕಿನ ಮಾದಪಟ್ಟಣದಲ್ಲಿ ಕ್ರಷರ್ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಮೃತಪಟ್ಟಿರುವುದು ತೀವ್ರ ದುಃಖವನ್ನುಂಟು ಮಾಡಿದೆ.

ಭಗವಂತ ಮೃತರ ಆತ್ಮಕ್ಕೆ ಚಿರಶಾಂತಿ ದಯಪಾಲಿಸಲಿ, ಕುಟುಂಬಸ್ಥರಿಗೆ ನೋವು ಭರಿಸುವ ಶಕ್ತಿ ನೀಡಲಿ ಹಾಗೂ ಗಾಯಾಳುಗಳು ಶೀಘ್ರವೇ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ.

ಕಲ್ಲು ಕ್ವಾರಿಗಳಲ್ಲಿ ಕೆಲಸ ಮಾಡುವ ಕಾರ್ಮಿಕರ ಜೀವ ರಕ್ಷಣೆ ಹಾಗೂ ಭದ್ರತೆ ಒದಗಿಸುವುದು ಕ್ವಾರಿ ಮಾಲೀಕರ ಕರ್ತವ್ಯವಾಗಿದೆ. ನಿಯಮ ಉಲ್ಲಂಘಿಸುವ ಕ್ವಾರಿಗಳ ವಿರುದ್ಧ ಸರ್ಕಾರ ಸೂಕ್ತ ಕ್ರಮಕೈಗೊಳ್ಳಲಿದೆ’ ಎಂದಿದ್ದಾರೆ. ಜೊತೆಗೆ ಮೃತರ ಕುಟುಂಬದವರಿಗೆ ಪರಿಹಾರ ಕೊಡುವ ಬಗ್ಗೆ ಸದ್ಯದಲ್ಲೇ ತೀರ್ಮಾನ ಮಾಡುವುದಾಗಿ ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮೇಡಂ ನನ್ನ ಸೀಟ್ ಹೆಂಡ್ತಿ ತಗೊಂಡಿದ್ದಾಳೆ.. ಗಗನಸಖಿ ಬಳಿ ಪತಿಯ ಕಂಪ್ಲೇಂಟ್, ವಿಮಾನವಿಡೀ ನಗುವೋ ನಗು Video