Publish Date: Thu, 04 Jun 2026 (09:10 IST)
Updated Date: Thu, 04 Jun 2026 (09:15 IST)
ಬೆಂಗಳೂರು: ಮುಖ್ಯಮಂತ್ರಿಯಾದ ಮೊದಲ ದಿನವೇ ಸಿಎಂ ಡಿಕೆ ಶಿವಕುಮಾರ್ ತಮ್ಮ ಸಂಪುಟ ಸಹೋದ್ಯೋಗಿಗಳಿಗೆ ಶಾಕ್ ಕೊಟ್ಟಿದ್ದಾರೆ.
ಮುಖ್ಯಮಂತ್ರಿಯಾದ ಬಳಿಕ ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್ ಸಚಿವರಿಗೆ ಚುರುಕು ಮುಟ್ಟಿಸಿದ್ದಾರೆ. ಸಚಿವರು 24/7 ರೀತಿಯಲ್ಲಿ ಕೆಲಸ ಮಾಡಬೇಕು. ಆಡಳಿತ ವಿಚಾರದಲ್ಲಿ ಮೈಗಳ್ಳತನ ತೋರಿದರೆ ಅದನ್ನು ಸಹಿಸುವುದಿಲ್ಲ ಎಂದು ಮೊದಲ ದಿನವೇ ಎಚ್ಚರಿಕೆ ನೀಡಿದ್ದಾರೆ.
ಯಾವ ಮಂತ್ರಿಗಳನ್ನೂ ಸುಮ್ಮನೇ ಬಿಡಲ್ಲ. ದಿನದ 24 ಗಂಟೆಯೂ ಎಂಬಂತೆ ಕೆಲಸ ಮಾಡಬೇಕು. ಕೇವಲ ಬೆಂಗಳೂರಿಗೆ ಸೀಮಿತವಾಗದೇ ಎಲ್ಲಾ ಶಾಸಕರು ಮತ್ತು ಸಚಿವರು ತಮ್ಮ ವ್ಯಾಪ್ತಿಯ ಜಿಲ್ಲೆಗಳಿಗೆ ಕಡ್ಡಾಯವಾಗಿ ತೆರಳಿ ಜನರ ಸಮಸ್ಯೆಗಳಿಗೆ ಕಿವಿಯಾಗಬೇಕು ಎಂದು ಆದೇಶ ನೀಡಿದ್ದಾರೆ.
ಡಿಕೆ ಶಿವಕುಮಾರ್ ಖಡಕ್ ವ್ಯಕ್ತಿ ಎಂದು ಎಲ್ಲರಿಗೂ ಗೊತ್ತು. ಇದನ್ನು ಅವರು ಮೊದಲ ದಿನವೇ ಸಾಬೀತು ಮಾಡಿದ್ದಾರೆ. ತಮ್ಮ ಆದೇಶಗಳಿಗೆ ಬೆಲೆ ಕೊಡದೇ ಇದ್ದರೆ ಕಠಿಣ ಕ್ರಮ ಕೈಗೊಳ್ಳಲೂ ಹಿಂದೆ ಮುಂದೆ ನೋಡಲ್ಲ ಎಂದು ಸಂದೇಶ ರವಾನಿಸಿದ್ದಾರೆ.
About Writer
ಕೃಷ್ಣವೇಣಿ ಕೆ
Completed bachelor degree in Journalism and communication in SDMC Ujire. 15 years of experience as journalist. Worked as sub editor and reporter. Specialties in sports, politics and entertainment.....
ಮತ್ತಷ್ಟು ಓದಿ