Daily Horoscope
✕

ಒಂದೇ ಒಂದು ಮಾತಿನಿಂದ ಟಿಬಿ ಜಯಚಂದ್ರ ಮುನಿಸು ಮರೆಸಿದ ಸಿಎಂ ಡಿಕೆ ಶಿವಕುಮಾರ್

ಕೃಷ್ಣವೇಣಿ ಕೆ
ಶನಿವಾರ, 8 ಆಗಸ್ಟ್ 2026 (09:48 IST)
Photo Credit: Social media
ಬೆಂಗಳೂರು: ಒಂದೇ ಒಂದು ಮಾತಿನಿಂದ ಮುನಿಸಿಕೊಂಡಿದ್ದ ಹಿರಿಯ ಶಾಸಕ ಟಿಬಿ ಜಯಚಂದ್ರ ಮನಸ್ಸು ಬದಲಾಯಿಸುವಲ್ಲಿ ಸಿಎಂ ಡಿಕೆ ಶಿವಕುಮಾರ್ ಯಶಸ್ವಿಯಾಗಿದ್ದಾರೆ.

ಸಚಿವ ಸಂಪುಟ ವಿಸ್ತರಣೆಯಾದ ಬೆನ್ನಲ್ಲೇ ಸಚಿವ ಸ್ಥಾನ ಸಿಗಲಿಲ್ಲ ಎಂದು ಹಲವು ಶಾಸಕರು ಅಸಮಾಧಾನಗೊಂಡಿದ್ದರು. ಕೆಲವರು ರಾಜೀನಾಮೆಗೆ ಮುಂದಾಗಿದ್ದರು. ಖುದ್ದಾಗಿ ಎಲ್ಲಾ ಶಾಸಕರ ಮನೆಗೆ ಭೇಟಿ ನೀಡಿ ಸಿಎಂ ಮತ್ತು ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಸಂಧಾನ ನಡೆಸಿದ್ದರು.

ಇದರ ನಡುವೆ ಹಿರಿಯ ಶಾಸಕ ಟಿಬಿ ಜಯಚಂದ್ರ ಬಹಿರಂಗವಾಗಿಯೇ ತಮ್ಮ ಆಕ್ರೋಶ ಹೊರಹಾಕಿದ್ದರು. ನಾನು ಕಾಂಗ್ರೆಸ್ಸಿಗನೇ ಅಲ್ಲ ಎಂಬ ರೀತಿಯಲ್ಲಿ ಮಾತನಾಡಿದ್ದರು. ತಾರಕಕ್ಕೇರಿದ ಅವರ ಮುನಿಸನ್ನು ಸಿಎಂ ಡಿಕೆ ಶಿವಕುಮಾರ್ ಒಂದೇ ಭೇಟಿಯಿಂದ ಮರೆಸಿದ್ದಾರೆ.

ನಿನ್ನೆ ರಾತ್ರಿ ಟಿಬಿ ಜಯಚಂದ್ರ ಮನೆಗೆ ಭೇಟಿ ನೀಡಿದ ಸಿಎಂ ಡಿಕೆ ಶಿವಕುಮಾರ್ ಸ್ಪೀಕರ್ ಆಗುವಂತೆ ಮನವೊಲಿಸಿದ್ದಾರೆ. ಇದನ್ನು ಅವರು ಒಪ್ಪಿಕೊಂಡಿದ್ದಾರೆ. ಸದ್ಯಕ್ಕೆ ನಾನು ಸ್ಪೀಕರ್ ಆಗಿ ಕೆಲಸ ಮಾಡಲಿದ್ದೇನೆ. ನನ್ನ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಸಿಕ್ಕಿದೆ ಎಂದು ಟಿಬಿ ಜಯಚಂದ್ರ ಹೇಳಿದ್ದಾರೆ. ಹೀಗಾಗಿ ಸದ್ಯಕ್ಕೆ ಇವರ ಮುನಿಸು ಮರೆಯಾದಂತೆ ತೋರುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೂಡಲಸಂಗಮದಲ್ಲಿ ನಾನ್ ವೆಜ್ ಸೇವಿಸಿದ ಅನ್ಯಕೋಮಿನವರು: ವಿಡಿಯೋ ಹಂಚಿ ಬಿಜೆಪಿ ಆಕ್ರೋಶ Video

ಮೇಲ್ಮನೆ 4 ಕ್ಷೇತ್ರಗಳಲ್ಲೂ ಎನ್‍ಡಿಎ ಗೆಲುವು: ವಿಜಯೇಂದ್ರ ವಿಶ್ವಾಸ

ಬೆಂಗಳೂರಿನಲ್ಲಿ ದಿಢೀರ್ ಭಾರಿ ಮಳೆ: ಸಂಜೆ ಮನೆಗೆ ತೆರಳುವ ಮುನ್ನ ಎಚ್ಚರ

ಅಬ್ಬಾ ಎಂಥಾ ಭಯಾನಕ ದೃಶ್ಯ…ಪೊಲೀಸ್ ಠಾಣೆಯಲ್ಲೇ ಈ ವ್ಯಕ್ತಿ ಮಾಡಿದ ಕೆಲಸ ನೋಡಿದ್ರೆ ಎದೆ ಝಲ್ಲೆನಿಸುತ್ತದೆ Video

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments