Publish Date: Fri, 19 Jun 2026 (10:50 IST)
Updated Date: Fri, 19 Jun 2026 (10:52 IST)
ಬೆಂಗಳೂರು: ಕರ್ನಾಟಕದಲ್ಲಿ ನಿನ್ನೆ ವಿಧಾನಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಐದು ಸ್ಥಾನ ಗೆದ್ದ ಬೆನ್ನಲ್ಲೇ ಸಿಎಂ ಡಿಕೆ ಶಿವಕುಮಾರ್ ಮಾಡಿದ ಮುಖ್ಯ ಕೆಲಸವೇನು ಗೊತ್ತಾ?
ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ ಗೆ ಈ ವಿಧಾನಪರಿಷತ್ ಚುನಾವಣೆ ಪ್ರತಿಷ್ಠೆಯ ಕಣವಾಗಿತ್ತು. ಈ ಚುನಾವಣೆಯಲ್ಲಿ ಬಿಜೆಪಿ ಶಾಸಕರು ಅಡ್ಡಮತದಾನ ಮಾಡಿದ್ದೂ ಕಾಂಗ್ರೆಸ್ ಗೆ ಲಾಭವಾಗಿತ್ತು. ಒಟ್ಟು ಏಳು ಸ್ಥಾನಗಳ ಪೈಕಿ ಐದು ಸ್ಥಾನವನ್ನು ಕಾಂಗ್ರೆಸ್ ಗೆದ್ದು ಬೀಗಿದೆ.
ಇದು ಡಿಕೆ ಶಿವಕುಮಾರ್ ಗೆ ದೊಡ್ಡ ಮುನ್ನಡೆಯಾಗಿದೆ. ಈ ಗೆಲುವಿನ ಬಳಿಕ ಇಂದು ಬೆಳ್ಳಂ ಬೆಳಿಗ್ಗೆಯೇ ಪತ್ನಿ ಉಷಾ, ಪುತ್ರ ಮತ್ತು ಅಳಿಯನ ಜೊತೆ ಡಿಕೆ ಶಿವಕುಮಾರ್ ತಿರುಪತಿ ತಿಮ್ಮಪ್ಪನ ದರ್ಶನ ಪಡೆದು ಬಂದಿದ್ದಾರೆ.
ಇಂದು ಮುಂಜಾನೆ ತಿರುಪತಿಗೆ ಭೇಟಿ ನೀಡಿದ ಡಿಕೆ ಶಿವಕುಮಾರ್ ಗೆ ಶಾಸಕ, ಆಪ್ತ ಡಾ ರಂಗನಾಥ್ ಕೂಡಾ ಸಾಥ್ ನೀಡಿದ್ದಾರೆ. ಪಂಚೆ ಉಟ್ಟುಕೊಂಡು ಸಾಂಪ್ರದಾಯಿಕ ಉಡುಗೆಯಲ್ಲಿ ದೇವರ ದರ್ಶನ ಮಾಡಿ ಬಂದಿದ್ದಾರೆ. ಸಿಎಂ ಆದ ಬಳಿಕ ಡಿಕೆಶಿ ಹಲವು ದೇವಾಲಯಗಳಿಗೆ ಭೇಟಿ ನೀಡಿ ಹರಕೆ ತೀರಿಸಿದ್ದರು. ಇದೀಗ ತಿರುಮಲಕ್ಕೆ ಭೇಟಿ ನೀಡಿದ್ದಾರೆ.
About Writer
ಕೃಷ್ಣವೇಣಿ ಕೆ
Completed bachelor degree in Journalism and communication in SDMC Ujire. 15 years of experience as journalist. Worked as sub editor and reporter. Specialties in sports, politics and entertainment.....
ಮತ್ತಷ್ಟು ಓದಿ