Publish Date: Fri, 31 Jul 2026 (19:47 IST)
Updated Date: Fri, 31 Jul 2026 (19:52 IST)
ನಮ್ಮ ನೀರು ನಮ್ಮ ಹಕ್ಕು ಎಂದು ಪಾದಯಾತ್ರೆ ಮಾಡಿದ ಮಾನ್ಯ ಮುಖ್ಯಮಂತ್ರಿಗಳೇ ಕಾವೇರಿ ನೀರನ್ನು ಬಿಟ್ಟು ನಮ್ಮ ನಾಡಿನ ರೈತರಿಗೆ ಅನ್ಯಾಯ ಮಾಡಬೇಡಿ ಬಿಜೆಪಿ ನಾಯಕ ಸಿಟಿ ರವಿ ಹೇಳಿದ್ದಾರೆ.
ರಾಜ್ಯದಲ್ಲಿ ಭೀಕರ ಬರಗಾಲದ ಪರಿಸ್ಥಿತಿ ಇದ್ದರೂ ಕನ್ನಡನಾಡಿನ ಜೀವನದಿ ಕಾವೇರಿಯ ನೀರಿನ ವಿಚಾರದಲ್ಲಿ ರಾಜ್ಯ ಸರ್ಕಾರ ನಿರ್ಲಕ್ಷ್ಯ ವಹಿಸಿದೆ. ರಾಜ್ಯದ ಅನ್ನದಾತರ ಹಿತಾಸಕ್ತಿಯನ್ನು ಬಲಿಗೊಟ್ಟು, ಕಾವೇರಿ ಕೊಳ್ಳದ ಜನರಿಗೆ ಕುಡಿಯುವ ನೀರಿಗೂ ಹಾಹಾಕಾರ ಸೃಷ್ಟಿಸಿರುವ ಸರ್ಕಾರದ ವೈಫಲ್ಯದ ವಿರುದ್ಧ ಇಂದು ಮಂಡ್ಯದ ಕೆ.ಆರ್.ಎಸ್. ಅಣೆಕಟ್ಟಿನ ಬಳಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಈ ಸಂಬಂಧ ಅವರು ಸಾಮಾಜಿಕ ಜಾಲತಾಣದಲ್ಲಿ ಅವರು ಬರೆದುಕೊಂಡಿದ್ದಾರೆ.
ಮುಖ್ಯಮಂತ್ರಿಗಳೇ, ನೀವು ತಮಿಳುನಾಡಿನ ವಾಟರ್ ಮ್ಯಾನ್ ಅಲ್ಲಾ, ಕರ್ನಾಟಕದ ಮುಖ್ಯಮಂತ್ರಿಗಳು. ಕಾವೇರಿ ನೀರಿನ ವಿಚಾರದಲ್ಲಿ ಬಂಡತನದಿಂದ ವರ್ತಿಸಬೇಡಿ ಬಂಡೆಯಂತೆ ನಿಲ್ಲಿ. ನಿಮ್ಮ ಅಧಿಕಾರದಾಸೆಗೆ ರೈತರ ಬದುಕಿನೊಂದಿಗೆ ಚೆಲ್ಲಾಟವಾಡಬೇಡಿ. ರೈತರ ಪರವಾಗಿ ಕಠಿಣ ನಿರ್ಧಾರವನ್ನು ತೆಗೆದುಕೊಳ್ಳಿ.
ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಸನ್ಮಾನ್ಯ @BSYBJP
, ರಾಜ್ಯಾಧ್ಯಕ್ಷರಾದ @BYVijayendra
,ವಿರೋಧ ಪಕ್ಷದ ನಾಯಕರಾದ ಶ್ರೀ @RAshokaBJP
, ವಿಧಾನ ಪರಿಷತ್ ವಿಪಕ್ಷ ನಾಯಕರಾದ ಶ್ರೀ @NswamyChalavadi
, ಶಾಸಕರಾದ ಶ್ರೀ ಶ್ರೀ ವತ್ಸ, ಶ್ರೀ ರಘು ಕೌಟಿಲ್ಯ, ಮಾಜಿ ಸಚಿವರಾದ ಶ್ರೀ ಕೆ.ಸಿ. ನಾರಾಯಣಗೌಡ, ಶ್ರೀ ಎನ್. ಮಹೇಶ್, ಮಾಜಿ ಸಂಸದರಾದ ಶ್ರೀಮತಿ ಸುಮಲತಾ ಅಂಬರೀಶ್, ಪಕ್ಷದ ಮಂಡ್ಯ ಜಿಲ್ಲಾಧ್ಯಕ್ಷರಾದ ಶ್ರೀ ಇಂದ್ರೇಶ್, ಮೈಸೂರು ಜಿಲ್ಲಾಧ್ಯಕ್ಷರಾದ ಶ್ರೀ ನಾಗೇಂದ್ರ, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಪ್ರೀತಮ್ ಗೌಡ ಸೇರಿದಂತೆ ಪ್ರಮುಖ ಮುಖಂಡರು, ಅನ್ನದಾತ ಬಂಧುಗಳು ಸಹಸ್ರ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.
About Writer
ಸಂಪ್ರಿಯ
ಕನ್ನಡ ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷದಲ್ಲಿ ಬೇರೆ ಬೇರೆ ಸಂಸ್ಥೆಗಳಲ್ಲಿ ರಿಪೋರ್ಟರ್ ಆಗಿ, ಸಬ್ ಎಡಿಟರ್ ಆಗಿ, ಇದೀಗ ಕಂಟೆಂಟ್ ರೈಟರ್ ಆಗಿ ವೆಬ್ದುನಿಯಾದಲ್ಲಿ ಕೆಲಸ. ಆಳ್ವಾಸ್ ಕಾಲೇಜಿನಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋಧ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು 2016ನೇ ಸಾಲಿನಲ್ಲಿ ಪಡೆದಿರುತ್ತೇನೆ. ಮನರಂಜನೆ, ಲೈಫ್ಸ್ಟೈಲ್, ರಾಜಕೀಯ ಸುದ್ದಿಗಳ ಬಗ್ಗೆ ವಿಶೇಷ ಆಸಕ್ತಿ. ....
ಮತ್ತಷ್ಟು ಓದಿ