Publish Date: Sat, 05 Mar 2022 (18:12 IST)
Updated Date: Sat, 05 Mar 2022 (18:14 IST)
ಬೆಂಗಳೂರಿನ ಬಸವನಗುಡಿಯ ಶ್ರೀ ಉತ್ತರಾದಿಮಠದ ಜಯತೀರ್ಥ ವಿದ್ಯಾಪೀಠದಲ್ಲಿ ಸಂಭ್ರಮದ ಶ್ರೀಮನ್ ನ್ಯಾಯಸುಧಾ ಮಂಗಳ ಮಹೋತ್ಸವ ಕಾರ್ಯಕ್ರಮ ಜರುಗಿದೆ. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪಾಲ್ಗೊಂಡಿದ್ದರು.
ಇದೇ ವೇಳೆ ಗೋವಿಗೆ ಪೂಜೆ ಸಲ್ಲಿಸಿದ ಸಿಎಂ, ಬಳಿಕ ನಾಡಿನ ಒಳಿತಿಗಾಗಿ ಪ್ರಾರ್ಥಿಸಿದರು. ಇದೇ ಸಂದರ್ಭದಲ್ಲಿ ಉತ್ತರಾದಿಮಠದ ಶ್ರೀ ಸತ್ಯಾತ್ಮತೀರ್ಥ ಶ್ರೀಪಾದಂಗಳು, ಕೋಡ್ಲಿ ಅಕ್ಷೋಭ್ಯತೀರ್ಥ ಮಠದ ಶ್ರೀ ರಘು ವಿಜಯತೀರ್ಥರು ಮತ್ತಿತರರು ಪಾಲ್ಗೊಂಡಿದ್ದರು.