Select Your Language

Notifications

webdunia
webdunia
webdunia
webdunia

ಸಿಎಂ ಬೆಂಗಾವಲು ವಾಹನಕ್ಕೆ ಡಿಕ್ಕಿ ಹೊಡೆದ ಶಿವರಾಮ್ ಹೆಬ್ಬಾರ್ ಕಾರು!

escorts car
bengaluru , ಗುರುವಾರ, 29 ಜುಲೈ 2021 (14:19 IST)
ರಾಜ್ಯದ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಬೆಂಗಾವಲು ವಾಹನಕ್ಕೆ ಮಾಜಿ ಸಚಿವ ಶಿವರಾಮ್ ಹೆಬ್ಬಾರ್ ಅವರ ಕಾರು ಡಿಕ್ಕಿ ಹೊಡೆದ ಘಟನೆ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ.
ನೂತನ ಸಿಎಂ ಬಸವರಾಜ ಬೊಮ್ಮಾಯಿ ವಾಣಿಜ್ಯನಗರಿ ಹುಬ್ಬಳ್ಳಿ
ಗೆ ಭೇಟಿ ನೀಡಲು ಗುರುವಾರ ಬೆಳಿಗ್ಗೆ ಆಗಮಿಸಿದಾಗ ವಿಮಾನ ನಿಲ್ದಾಣದ ಬಳಿಯಲ್ಲಿ ಈ ಘಟನೆ ಸಂಭವಿಸಿದೆ.
ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ಸಿಎಂ ಹೊರ ಹೋಗುತ್ತಿದ್ದಾಗ ಹೆಬ್ಬಾರ್ ಅವರ ಕರು ಹಿಂದಿನಿಂದ ಡಿಕ್ಕಿ ಹೊಡೆದಿದ್ದು, ಯಾವುದೇ ಅದೃಷ್ಟವಶಾತ್ ಅನಾಹುತ ಸಂಭವಿಸಿಲ್ಲ. ಘಟನೆಯಲ್ಲಿ ಎರಡೂ ವಾಹನಗಳಿಗೆ ಸಣ್ಣಪುಟ್ಟ ಹಾನಿ ಸಂಭವಿಸಿದೆ.
ಅಪಘಾತ ಸಂಭವಿಸುವಾಗ ಶಿವರಾಮ ಹೆಬ್ಬಾರ್ ಸಿಎಂ ಕಾರಿನಲ್ಲಿದ್ದರು. ಅಲ್ಲದೆ ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸಿಎಂ ಕಾರು ಹಿಂಬಾಲಿಸುವ ಭರದಲ್ಲಿ ಆಪಘಾತ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.

Share this Story:

Follow Webdunia kannada

ಮುಂದಿನ ಸುದ್ದಿ

ಹೆಚ್ಚುವರಿ ವಿಮಾನಯಾನಗಳನ್ನು ಪ್ರಕಟಿಸಿದ ಏರ್ ಇಂಡಿಯಾ