Select Your Language

Notifications

webdunia
webdunia
webdunia
webdunia

ಬೆಳಗಾವಿ ಜಿಲ್ಲೆಯಲ್ಲಿ 11 ದಿನ ಗಣೇಶೋತ್ಸವ ಆಚರಣೆಗೆ ಸಿಎಂ ಅನುಮತಿ

ಬೆಳಗಾವಿ ಜಿಲ್ಲೆಯಲ್ಲಿ 11 ದಿನ ಗಣೇಶೋತ್ಸವ ಆಚರಣೆಗೆ ಸಿಎಂ ಅನುಮತಿ
ಬೆಂಗಳೂರು , ಗುರುವಾರ, 9 ಸೆಪ್ಟಂಬರ್ 2021 (12:03 IST)
ಬೆಂಗಳೂರು : ರಾಜ್ಯದಲ್ಲಿ ಗಣೇಶೋತ್ಸವ ಆಚರಣೆಗೆ 5 ದಿನ ಮಾತ್ರ ಅವಕಾಶ ನೀಡಲಾಗಿದ್ದು, ಆದರೆ ಗಡಿ ಜಿಲ್ಲೆ ಬೆಳಗಾವಿಯಲ್ಲಿ 11 ದಿನಗಳ ಕಾಲ ಗಣೇಶೋತ್ಸವ ಆಚರಿಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ.

ಈ ಬಗ್ಗೆ ಬೆಳಗಾವಿ ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಅಭಯ್ ಪಾಟೀಲ್ ಮಾಹಿತಿ ನೀಡಿದ್ದು, ಬೆಳಗಾವಿಯಲ್ಲಿ 11 ದಿನ ಗಣೇಶೋತ್ಸವ ಆಚರಿಸಲು ಸಿಎಂ ಬಸವರಾಜ್ ಬೊಮ್ಮಾಯಿ ಸಮ್ಮತಿ ನೀಡಿದ್ದಾರೆ. ಜಿಲ್ಲೆಯಲ್ಲಿ ಗಣೇಶ ಹಬ್ಬವನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಗುವುದು ಹೀಗಾಗಿ 11 ದಿನ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡುವಂತೆ ಮನವಿ ಮಾಡಿದ್ದೆ. ಇದಕ್ಕೆ ಸಿಎಂ ಅನುಮತಿ ನೀಡಿದ್ದಾರೆ ಎಂದು ಹೇಳಿದರು.
ಇನ್ನು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ 5 ದಿನಗಳ ಕಾಲ ಗಣೇಶೋತ್ಸವ ಆಚರಿಸಲು ಅವಕಾಶ ನಿಡಲಾಗಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಬಿಬಿಎಂಪಿ ಕೇವಲ 3 ದಿನ ಮಾತ್ರ ಗಣೇಶೋಸವ ಆಚರಣೆಗೆ ಅನುಮತಿ ನೀಡಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಗೌರಿ-ಗಣೇಶ ಹಬ್ಬದ ಶುಭ ಕೋರಿದ ದೇವೇಗೌಡರು