Select Your Language

Notifications

webdunia
webdunia
webdunia
Saturday, 5 April 2025
webdunia

ಸಿಎಂ ಗ್ರಾಮವಾಸ್ತವ್ಯ: ಅಧಿಕಾರಿಗಳಿಗೆ ಖಡಕ್ ಸೂಚನೆ

ಸಿಎಂ
ಕಲಬುರಗಿ , ಶುಕ್ರವಾರ, 21 ಜೂನ್ 2019 (15:08 IST)
ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಜೂನ್ 22 ರಂದು ಬಿಸಿಲೂರು ಖ್ಯಾತಿಯ ಜಿಲ್ಲೆಯಲ್ಲಿ ಗ್ರಾಮ ವಾಸ್ತವ್ಯ ಮಾಡುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಲಾಗಿದೆ.

ಕಲಬುರಗಿ ತಾಲೂಕಿನ ಹೇರೂರ(ಬಿ) ಗ್ರಾಮದಲ್ಲಿ ಏರ್ಪಡಿಸಲಾಗಿರುವ ಜನತಾ ದರ್ಶನ ಕಾರ್ಯಕ್ರಮಕ್ಕೆ ಆಗಮಿಸುವ ಜಿಲ್ಲೆಯ ಎಲ್ಲ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಖಾಸಗಿ ಅಥವಾ ಇಲಾಖೆಯ ವಾಹನ ಬಳಸದೇ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಾಹನದ ಮೂಲಕ ಆಗಮಿಸಬೇಕು ಎಂದು ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ ತಿಳಿಸಿದ್ದಾರೆ.

ಜೂನ್ 22 ರಂದು ಬೆಳಿಗ್ಗೆ 6 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಆವರಣದಿಂದ ಸಾರಿಗೆ ಸಂಸ್ಥೆಯ ವಿಶೇಷ ಬಸ್ಸುಗಳ ಹೇರೂರ (ಬಿ) ಗ್ರಾಮಕ್ಕೆ ಹೊರಡಲಿವೆ. ಎಲ್ಲ ಇಲಾಖೆಗಳ ಅಧಿಕಾರಿಗಳು ಮತ್ತು ಕರ್ತವ್ಯಕ್ಕೆ ನಿಯೋಜಿಸಲ್ಪಟ್ಟ ಸಿಬ್ಬಂದಿ ವರ್ಗವು ಈ ಸಾರಿಗೆ ಬಸ್‍ಗಳ ಮೂಲಕ ಸಕಾಲಕ್ಕೆ ಆಗಮಿಸಬೇಕು. ಜನತಾ ದರ್ಶನ ಕಾರ್ಯಕ್ರಮದಲ್ಲಿ ಕಡ್ಡಾಯವಾಗಿ ಭಾಗವಹಿಸಬೇಕೆಂದು ಅವರು  ತಿಳಿಸಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ಸಿಎಂ ಜನತಾ ದರ್ಶನದಲ್ಲಿ ಇವನ್ನು ತರಲೇಬೇಕು..!