Publish Date: Wed, 16 Sep 2020 (22:24 IST)
Updated Date: Wed, 16 Sep 2020 (22:25 IST)
ದೆಹಲಿಗೆ ಸಿಎಂ ಬಿ.ಎಸ್.ಯಡಿಯೂರಪ್ಪ ತೆರಳುತ್ತಿದ್ದು, ಪಕ್ಷದ ಹೈಕಮಾಂಡ್ ಭೇಟಿ ಮಾಡಲಿದ್ದಾರೆ.
ಪಕ್ಷದ ಪ್ರಮುಖರನ್ನು ಸಿಎಂ ಬಿ.ಎಸ್.ಯಡಿಯೂರಪ್ಪನವರು ದೆಹಲಿಯಲ್ಲಿ ಭೇಟಿ ಮಾಡಿ ಬಂದರೂ ರಾಜ್ಯ ಸಚಿವ ಸಂಪುಟ ವಿಸ್ತರಣೆ ಆಗುವುದಿಲ್ಲ.
ಹೀಗಂತ ಖಡಕ್ ಆಗಿ ಸಚಿವ ಆರ್. ಅಶೋಕ್ ಹೇಳಿದ್ದಾರೆ.
ಸಚಿವ ಸಂಪುಟ ವಿಸ್ತರಣೆ ಅಥವಾ ಪುನರಚನೆ ಬಗ್ಗೆ ಮಾತನಾಡೋದಕ್ಕೆ ಸಿಎಂ ದೆಹಲಿಗೆ ಹೋಗ್ತಿಲ್ಲ ಎಂದು ಸಚಿವ ಅಶೋಕ್ ಸ್ಪಷ್ಟಪಡಿಸಿದ್ದಾರೆ.