Daily Horoscope

Select Your Language

Notifications

webdunia
webdunia
webdunia
webdunia

ಬಿಸಿಲೂರಿನಲ್ಲಿ ಬಿಸಿ ಬಿಸಿ ಸಭೆ ನಡೆಸಿದ ಸಿಎಂ ಹೆಚ್.ಡಿ.ಕುಮಾರಸ್ವಾಮಿ

ಸಿಎಂ
ಹೈದ್ರಾಬಾದ್ ಕರ್ನಾಟಕ ಪ್ರದೇಶದಲ್ಲಿ ಗ್ರಾಮವಾಸ್ತವ್ಯದಲ್ಲಿರುವ ಸಿಎಂ ಬಿಸಿ ಬಿಸಿ ಸಭೆ ನಡೆಸಿದ್ದಾರೆ. 

ಮುಖ್ಯಮಂತ್ರಿಗಳಾದ ಹೆಚ್. ಡಿ. ಕುಮಾರಸ್ವಾಮಿ ಅವರು ಕಲಬುರಗಿಯಲ್ಲಿ ಕಲಬುರಗಿ ಜಿಲ್ಲೆಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿದರು.

ಕಲಬುರ್ಗಿ ಜಿಲ್ಲೆಗೆ ಸಮರ್ಪಕ ಕುಡಿಯುವ ನೀರು ಪೂರೈಕೆ, ಕಲಬುರ್ಗಿ ಜಿಲ್ಲೆಯ ಸಮಗ್ರ ಅಭಿವೃದ್ಧಿ ಹಾಗೂ ಕಲಬುರ್ಗಿ ಜಿಲ್ಲೆಯ ಬರ ಪರಿಹಾರ ಕಾಮಗಾರಿಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಅಧಿಕಾರಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಿದರು. 

ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ ಖರ್ಗೆ, ಕಲಬುರ್ಗಿ ವಿಭಾಗದ ಪ್ರಾದೇಶಿಕ ಆಯುಕ್ತ ಸುಭೋದ್ ಯಾದವ್, ಐ.ಜಿ.ಪಿ. ಮನೀಶ್ ಕರ್ಬಿಕರ್, ಜಿಲ್ಲಾಧಿಕಾರಿ ಆರ್. ವೆಂಕಟೇಶ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಕ ಅಧಿಕಾರಿ ರಾಜಾ ಪಿ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಡಾಮಾರ್ಟಿನ ಮಾರ್ಬನ್ಯಾಂಗ ಮತ್ತಿತರರು ಇದ್ದರು.



Share this Story:

Follow Webdunia kannada

ಮುಂದಿನ ಸುದ್ದಿ

ಗ್ರಾಮ ವಾಸ್ತವ್ಯದ ಕುರಿತು ಸಿಎಂ ಹೇಳಿದ್ದೇನು?