Publish Date: Thu, 21 Jun 2018 (11:11 IST)
Updated Date: Thu, 21 Jun 2018 (11:13 IST)
ಬೆಂಗಳೂರು: ಐಟಿ ಇಲಾಖೆ ಭಾರೀ ಆರೋಪ ಹಣದ ಅವ್ಯವಹಾರ ಆರೋಪ ಹೊರಿಸಿರುವ ಹಿನ್ನಲೆಯಲ್ಲಿ ಡಿಕೆ ಶಿವಕುಮಾರ್ ರಾಜೀನಾಮೆ ಕೊಡುವ ಅಗತ್ಯವಿಲ್ಲ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.
ಐಟಿ ಇಲಾಖೆ ಭಾರೀ ಪ್ರಮಾಣದಲ್ಲಿ ಡಿಕೆ ಶಿವಕುಮಾರ್ ವಿರುದ್ಧ ಆರೋಪ ಹೊರಿಸಿರುವುದು ರಾಜ್ಯದ ಸಮ್ಮಿಶ್ರ ಸರ್ಕಾರಕ್ಕೆ ಭಾರೀ ಮುಜುಗರವುಂಟುಮಾಡಿದೆ. ಅವರ ರಾಜೀನಾಮೆಗೆ ಒತ್ತಾಯಗಳು ಕೇಳಿಬರುತ್ತಿರುವ ಹಿನ್ನಲೆಯಲ್ಲಿ ಸಿಎಂ ಎಚ್ ಡಿಕೆ ಪ್ರತಿಕ್ರಿಯಿಸಿದ್ದಾರೆ.
‘ನನಗೆ ಅನಿಸಿದರೆ ನಾನೇ ಡಿಕೆ ಶಿವಕುಮಾರ್ ರಾಜೀನಾಮೆ ಕೇಳುವೆ. ಸದ್ಯದ ಪರಿಸ್ಥಿತಿಯಲ್ಲಿ ಅದರ ಅಗತ್ಯವಿಲ್ಲ’ ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.