Select Your Language

Notifications

webdunia
webdunia
webdunia
webdunia

ಆನಂದ್​​​ ಮಾಮನಿ ನಿಧನಕ್ಕೆ HDK ಸಂತಾಪ

ಆನಂದ್​​​ ಮಾಮನಿ ನಿಧನಕ್ಕೆ  HDK ಸಂತಾಪ
bangalore , ಭಾನುವಾರ, 23 ಅಕ್ಟೋಬರ್ 2022 (16:05 IST)
ಕರ್ನಾಟಕ ವಿಧಾನಸಭೆಯ ಉಪ ಸಭಾಪತಿ ಆನಂದ್ ಮಾಮನಿ ನಿಧನಕ್ಕೆ ಗಣ್ಯರು ಸಂತಾಪ ಸೂಚಿಸಿದ್ದಾರೆ. ಸಿಎಂ ಬಸವರಾಜ್​​​​ ಬೊಮ್ಮಾಯಿ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿ ಪಾರ್ಥಿವ ಶರೀರದ ದರ್ಶನ ಪಡೆದು, ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು. ಆಸ್ಪತ್ರೆಯಲ್ಲಿ ಆನಂದ್ ಮಾಮನಿ ಅಂತಿಮ ದರ್ಶನ ಪಡೆದ ಬಳಿಕ ಸಿಎಂ ಬೊಮ್ಮಾಯಿ ಮಾಧ್ಯಮದವರೊಂದಿಗೆ ಮಾತನಾಡಿದರು. ಕ್ರಿಯಾಶೀಲ‌ ರಾಜಕಾರಣಿಯಾಗಿದ್ದ ಮಾಮನಿ ನಮ್ಮೊಂದಿಗಿಲ್ಲ. ಎಲ್ಲದಕ್ಕಿಂತ ಹೆಚ್ಚಾಗಿ ನನ್ನ ಸ್ನೇಹಿತನನ್ನ ಕಳೆದುಕೊಂಡಿದ್ದೇನೆ. ನೀರಾವರಿ, ರಸ್ತೆ, ಶಾಲಾ ಕಟ್ಟಡಗಳು ಸೇರಿ, ತಮ್ಮ ಕ್ಷೇತ್ರವನ್ನ ಆನಂದ್​ ಮಾಮನಿ ಪ್ರೀತಿಸುತ್ತಿದ್ರು. ಕ್ಷೇತ್ರದ ಜನರು ಕೂಡ ಅವರನ್ನು ಅಷ್ಟೇ ಪ್ರೀತಿ‌ ಮಾಡುತ್ತಿದ್ದರು ಎಂದ್ರು.  ಆನಂದ್ ಮಾಮನಿ ನಿಧನಕ್ಕೆ ಸಂತಾಪ ಸೂಚಿಸಿದ ಶಾಸಕ K.S. ಈಶ್ವರಪ್ಪ ಮಾಮನಿ ನಿಧನದ ಸುದ್ದಿ ತಿಳಿದು ಬಹಳ ದುಃಖವಾಗಿದೆ. ಅವರ ಕುಟುಂಬಕ್ಕೆ ದುಃಖವನ್ನು ಭರಿಸುವಂತಹ ಶಕ್ತಿ ಆ ದೇವರು ನೀಡಲಿ ಎಂದು ಕೇಳಿಕೊಳ್ಳುತ್ತೇನೆ ಎಂದ್ರು. ಮಾಮನಿ ಸಾವಿಗೆ ಸಂತಾಪ ಸೂಚಿಸಿದ ಮಾಜಿ ಸಿಎಂ H.D. ಕುಮಾರಸ್ವಾಮಿ, ಮಾಮನಿ ಸ್ನೇಹಶೀಲತೆ, ಸರಳತೆ, ಸಜ್ಜನಿಕೆಯ ಸಾಕಾರಮೂರ್ತಿಯಾಗಿದ್ರು. ಮಾಮನಿ ನಿಧನರಾದರೆಂಬ ವಾರ್ತೆ ಕೇಳಿ ತೀವ್ರ ಆಘಾತವಾಯಿತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚೇತರಿಸಿಕೊಳ್ಳುತ್ತಾರೆಂಬ ವಿಶ್ವಾಸವಿತ್ತು. ಆದರೆ, ಅವರು ಎಲ್ಲರನ್ನೂ ಬಿಟ್ಟು ಅಗಲಿದ್ದು ನೋವು ತಂದಿದೆ ಎಂದು ಟ್ವೀಟ್​​ ಮಾಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಗಂಡ- ಹೆಂಡತಿಯ ಜಗಳ ಕೊಲೆಯಲ್ಲಿ ಅಂತ್ಯ