ಸಿಎಂ ಹೆಚ್.ಡಿ.ಕೆ ಜೆಡಿಎಸ್ ನ ರಾಜ್ಯಾಧ್ಯಕ್ಷರಾಗಲಿ- ಹೆಚ್.‌ ವಿಶ್ವನಾಥ್‌

ಗುರುವಾರ, 20 ಜೂನ್ 2019 (12:51 IST)
ಬೆಂಗಳೂರು : ಜೆಡಿಎಸ್‌ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಹೆಚ್.‌ ವಿಶ್ವನಾಥ್‌ ಅವರು ದಯಮಾಡಿ ನನ್ನ ರಾಜೀನಾಮೆಯನ್ನು ಅಂಗೀಕರಿಸಿ ಎಂದು ಮನವಿ ಮಾಡಿದ್ದಾರೆ.
ಇಂದು ನಡೆದ ಸುದ್ದಿಗೋಷ್ಟಿಯಲ್ಲಿ ಈ ಬಗ್ಗೆ  ಮಾತನಾಡಿದ ಅವರು, ರಾಜ್ಯಾಧ್ಯಕ್ಷ ಸ್ಥಾನವನ್ನು ಸಿಎಂ ಹೆಚ್.ಡಿ.ಕುಮಾರಸ್ವಾಮಿ  ಹೊತ್ತುಕೊಳ್ಳಲಿ. ಅವರೇ ಈ ಸ್ಥಾನವನ್ನು ನಿಭಾಹಿಸುವುದು ಸೂಕ್ತ. ಅವರಿಗೆ  ಸಿಎಂ ಸ್ಥಾನ, ರಾಜ್ಯಾಧ್ಯಕ್ಷ ಸ್ಥಾನ ಎರಡನ್ನು ನಿಬಾಯಿಸುವ ಸಾಮರ್ಥ್ಯವಿದೆ. ಪಕ್ಷದ ಹಿತದೃಷ್ಟಿಯಿಂದ ರಾಜ್ಯಾಧ್ಯಕ್ಷ ಸ್ಥಾನವನ್ನು ಹೆಚ್.ಡಿ.ಕೆ ಗೆ ನೀಡುವುದು ಒಳ್ಳೆಯದು ಎಂದು ಹೇಳಿದ್ದಾರೆ.


ಹಾಗೇ ನನಗೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಜೊತೆ ಕೆಲಸ ಮಾಡೋ ಆಸೆ ಇತ್ತು. ಆದರೆ ಸಿಎಂ ಹೆಚ್.ಡಿ.ಕುಮಾರಸ್ವಾಮಿ ನನ್ನ ಅನುಭವವನ್ನು ಬಳಸಿಕೊಳ್ಳಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಮುಂದಿನ ಸುದ್ದಿ ಟಿಕೆಟ್ ಇಲ್ಲದೆ ಪ್ರಯಾಣ ಬೆಳೆಸಿದ್ದ ಪಾರಿವಾಳಗಳಿಗೆ 900 ರೂ. ದಂಡ ಹಾಕಿದ ಕೆಎಸ್ ಆರ್ ಟಿಸಿ