Publish Date: Thu, 24 Aug 2017 (15:54 IST)
Updated Date: Thu, 24 Aug 2017 (15:58 IST)
ವಿಧಾನಪರಿಷತ್‌ಗೆ ನಡೆದ ಚುನಾವಣೆಯಲ್ಲಿ ಬೇರೆ ಪಕ್ಷಗಳ ಅಭ್ಯರ್ಥಿಗಳು ಸ್ಪರ್ಧಿಸದಿದ್ದರಿಂದ ಕಾಂಗ್ರೆಸ್ ಅಭ್ಯರ್ಥಿ ಸಿ.ಎಂ.ಇಬ್ರಾಹಿಂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಸಿ.ಎಂ.ಇಬ್ರಾಹಿಂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ವಿಧಾನಸಭೆಯ ಕಾರ್ಯದರ್ಶಿ ಎಸ್.ಮೂರ್ತಿ ಘೋಷಿಸಿದ್ದಾರೆ.
ಬಿಜೆಪಿಯ ವಿಮಲಾಗೌಡ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ವಿಧಾನಪರಿಷತ್‌ಗಾಗಿ ಚುನಾವಣೆ ನಡೆದಿತ್ತು. ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಅಭ್ಯರ್ಥಿಯನ್ನು ಕಣಕ್ಕಿಳಿಸಲು ನಿರಾಕರಿಸಿದ್ದವು.
ಚುನಾವಣೆ ಕಣದಲ್ಲಿ ಏಕೈಕ ಅಭ್ಯರ್ಥಿಯಾಗಿ ಸಿ.ಎಂ.ಇಬ್ರಾಹಿಂ ಕಣದಲ್ಲಿರುವುದರಿಂದ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.