Publish Date: Thu, 17 Aug 2017 (14:22 IST)
Updated Date: Thu, 17 Aug 2017 (14:25 IST)
ಹಿರಿಯ ಕಾಂಗ್ರೆಸ್ ಮುಖಂಡ ಸಿಎಂ. ಇಬ್ರಾಹಿಂ ಅವರಿಗೆ ವಿಧಾನಪರಿಷತ್‌ಗೆ ನಾಮ ನಿರ್ದೇಶನ ಮಾಡುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.
ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ಭೇಟಿ ಸಂದರ್ಭದಲ್ಲಿ ಇಬ್ರಾಹಿಂ ಅವರಿಗೆ ಎಂಎಲ್‌ಸಿ ಸ್ಥಾನ ನೀಡುವ ಬಗ್ಗೆ ಅನುಮತಿ ಪಡೆದಿದ್ದಾರೆ ಎನ್ನಲಾಗುತ್ತಿದೆ.
ಅರಣ್ಯ ಖಾತೆ ಸಚಿವ ರಮಾನಾಥ್ ರೈಗೆ ಗೃಹ ಸಚಿವರಾಗಿ ಬಡ್ತಿ ದೊರೆಯುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ. ಇಂದು ಸಂಜೆಯ ವೇಳೆಗೆ ಬೆಳವಣಿಗೆಗಳ ಬಗ್ಗೆ ಸಂಪೂರ್ಣ ನಿಚ್ಚಳವಾಗಲಿದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡರು ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.