Publish Date: Fri, 27 Apr 2018 (08:57 IST)
Updated Date: Fri, 27 Apr 2018 (09:00 IST)
ಬಾಗಲಕೋಟೆ: ಬಾದಾಮಿ ಕ್ಷೇತ್ರದಲ್ಲಿ ಚುನಾವಣೆಗೆ ನಿಂತಿರುವ ಸಿಎಂ ಸಿದ್ದರಾಮಯ್ಯ ವಿರುದ್ಧ ಟೀಕೆ ಮಾಡಿದ್ದ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ವಿರುದ್ಧ ಸಿಎಂ ಇಬ್ರಾಂಹಿ ವಾಗ್ದಾಳಿ ನಡೆಸಿದ್ದಾರೆ.
ಬಾದಾಮಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ಗೋಡಂಬಿಯೂ ಸಿಗಲ್ಲ, ದ್ರಾಕ್ಷಿಯೂ ಸಿಗಲ್ಲ ಎಂದು ಜಗದೀಶ್ ಶೆಟ್ಟರ್ ಲೇವಡಿ ಮಾಡಿದ್ದರು. ಇದಕ್ಕೆ ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಇಬ್ರಾಹಿಂ ದ್ರಾಕ್ಷಿ ಗೋಡಂಬಿ ಎಲ್ಲಾ ಶೆಟ್ಟರ್ ಅವರೇ ತಿನ್ನಲಿ ಎಂದು ತಿರುಗೇಟು ನೀಡಿದ್ದಾರೆ.
ನಮ್ಮದು ಬೇಳೆ ಕಾಳು ತಿನ್ನುವ ಬಡವರ ಪರ ಸರ್ಕಾರ. ನಮಗೆ ದ್ರಾಕ್ಷಿಯೂ ಬೇಕಾಗಿಲ್ಲ, ಗೋಡಂಬಿಯೂ ಬೇಕಾಗಿಲ್ಲ ಎಂದು ಸಿಎಂ ಇಬ್ರಾಹಿಂ ಹೇಳಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.